ದಾವಣಗೆರೆ : ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಪಿಎಸ್ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಡಿಜಿಪಿಯಂತಹ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು ಹೇಗೆ ಪ್ರಶ್ನಿಸುತ್ತಾರೆ.ಸಿಐಡಿಯಿಂದ ಸತ್ಯಾಸತ್ಯತೆ ಹೊರಬರುತ್ತದೆ ಎಂಬ ವಿಶ್ವಾಸ ನಮಗೆ ಇಲ್ಲ ಎಂದಿದ್ದಾರೆ
ಮಹಿಳೆಗೆ ಕಪಾಳಮೋಕ್ಷ ಮಾಡಿರುವ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ ವಿ. ಸೋಮಣ್ಣ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಸಚಿವರಾಗಲು ನಾಲಾಯಕ್. ಜನರ ಸಂಕಷ್ಟ, ಸಮಸ್ಯೆಗಳಿಗೆ ಸ್ಪಂದಿಸುವ ತಾಳ್ಮೆ, ಸಹನೆ ಇರದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIGG NEWS : ‘ಪಟಾಕಿ’ ಯಿಂದ ಸುಟ್ಟ ಗಾಯಕ್ಕೆ ಇಲ್ಲಿದೆ ಸರಳ ಮನೆ ಮದ್ದು |Diwali 2022