ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಸರ್ಕಾರಿ ಶಾಲೆಗಳ ( Government School ) ಮೂಲ ಸವಲತ್ತುಗಳ ಅಭಿವೃದ್ಧಿಗೆ ದೇಣಿಗೆ ಸಂಗ್ರಹಿಸೋದಕ್ಕೆ ಎಸ್ ಡಿ ಎಂ ಸಿಗೆ ( SDMC ) ಹಸಿರು ನಿಶಾನೆ ತೋರಿದೆ. ಈ ಮೂಲಕ ನಮ್ಮ ಶಾಲೆ, ನನ್ನ ಕೊಡುಗೆ ಎನ್ನುವಂತ ಹೊಸ ಯೋಜನೆಯನ್ನು ಪರಿಚಯಿಸಿದೆ.
ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ 100 ರೂಪಾಯಿ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದು, ಸರ್ಕಾರಿ ಶಾಲೆಯ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ ಹಾಕುತ್ತಿರುವ ಬಿಜೆಪಿ ಸರ್ಕಾರಕ್ಕೆ ಇಂಥಾ ಸ್ಥಿತಿ ಬರಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ. ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..! ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು ಎಂದು ವಾಗ್ಧಾಳಿ ನಡೆಸಿದ್ದಾರೆ.
ವಿದ್ಯಾರ್ಥಿಗಳಿಗೆ ಹಾಲು, ಬಿಸಿ ಊಟ, ಸಮವಸ್ತ್ರ-ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ ಕರ್ನಾಟಕ ಬಿಜೆಪಿ ಸರ್ಕಾರ ಈಗ ಅವರಿಂದ ದುಡ್ಡುಕಿತ್ತುಕೊಳ್ಳಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIG NEWS: 10 ಲಕ್ಷ ಉದ್ಯೋಗಾರ್ಥಿಗಳಿಗೆ ಅ.22ರಂದು ಪ್ರಧಾನಿ ಮೋದಿಯಿಂದ ಉದ್ಯೋಗ ಮೇಳಕ್ಕೆ ಚಾಲನೆ