ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬರ ಮಾಡಿಕೊಂಡರು.
ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಪ್ರವೇಶಿಸಿದ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಹಾಜರಿದ್ದರು.
ಇದರ ನಡುವೆ ಡಿ.ಕೆ ಶಿವಕುಮಾರ್ ಗೆ ಯಾಮಾರಿಸಿ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಸ್ವಾಗತ ಕೋರಿದ್ರ ಮಾಜಿ ಸಿಎಂ ಸಿದ್ದರಾಮಯ್ಯ ಎಂಬ ಪ್ರಶ್ನೆ ಮೂಡಿದೆ. ಬಂಡೀಪುರದಅರಣ್ಯದ ರಸ್ತೆಯಲ್ಲೇ ರಾಹುಲ್ ಗಾಂಧಿ ಅವರನ್ನು ಸಿದ್ದರಾಮಯ್ಯ ಸ್ವಾಗತಿಸಿದರು. ಅವರ ಕಾರಿನಲ್ಲೇ ಕುಳಿತು ಮಾರ್ಗಮಧ್ಯೆ ಕಾಫಿ ತಿಂಡಿಗೆಂದು ಹಂಗಳ ಗ್ರಾಮದ ರೆಸಾರ್ಟ್ಗೆ ರಾಹುಲ್ ಗಾಂಧಿ ಅವರನ್ನು ಕರೆದೊಯ್ದಿದ್ದಾರೆ.
ಇತ್ತಕಡೆ ಡಿಕೆಶಿ ವೇದಿಕೆ ಕಾರ್ಯಕ್ರಮದ ಸಿದ್ದತೆಯನ್ನು ಪರಿಶೀಲನೆ ಮಾಡುತ್ತಿದ್ದರೆ , ಅತ್ತಕಡೆ ಡಿಕೆಶಿಯವರನ್ನು ಯಾಮಾರಿಸಿ ಕಾಡಿನ ದಾರಿಯಲ್ಲೇ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ್ದಾರೆ. ಅಂಬೇಡ್ಕರ್ ಭವನದ ಬಳಿ ರಾಹುಲ್ ಗಾಂಧಿ ಸ್ವಾಗತಕ್ಕೆ ಸಿದ್ದತೆ ನಡೆಸಲಾಗಿತ್ತು. ಆದರೆ ಡಿಕೆಶಿಯನ್ನು ಬಿಟ್ಟು ದಾರಿ ನಡುವೆ ಖಾಸಗಿ ರೆಸಾರ್ಟ್ ನಲ್ಲಿ ಸಿದ್ದರಾಮಯ್ಯ ಜೊತೆ ತಿಂಡಿ ತಿಂದರು.
BREAKING NEWS : ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿದ ಭದ್ರತಾ ಪಡೆ
BIGG NEWS : ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆ : ಮೈಸೂರಿನ ಕೆಲವೆಡೆ ಸಂಚಾರ ಮಾರ್ಗ ಬದಲಾವಣೆ | Bharat Jodo Yatra