ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅಧಿಕೃತವಾಗಿ ಹಕ್ಕು ಮಂಡಿಸಿದ್ದಾರೆ.
ವಿಧಾನಸೌಧದ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ರಾಜಭವನದತ್ತ (ಲೋಕಭವನ) ಧಾವಿಸಿದರು. ಈ ವೇಳೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಸಿಎಂ ಆಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರು ಒಂದೇ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ್ದು ವಿಶೇಷವಾಗಿತ್ತು. ನಾಯಕರ ನಡುವಿನ ಈ ಒಗ್ಗಟ್ಟಿನ ಪ್ರದರ್ಶನ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ.
ರಾಜ್ಯಪಾಲರಿಗೆ ಆಹ್ವಾನ ಪತ್ರ ಸಲ್ಲಿಕೆ
ರಾಜಭವನಕ್ಕೆ ಆಗಮಿಸಿದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿತು. ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವ ಕುರಿತಾದ ಅಧಿಕೃತ ಪತ್ರವನ್ನು ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಹಸ್ತಾಂತರಿಸಲಾಯಿತು. ಜೊತೆಗೆ ನೂತನ ಸಂಪುಟ ರಚನೆಗೆ ಅವಕಾಶ ಮಾಡಿಕೊಡಬೇಕು ಮತ್ತು ಜೂನ್ 3ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ರಾಜ್ಯಪಾಲರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಯಿತು.
ಸರಳ ಸಮಾರಂಭಕ್ಕೆ ಸಿದ್ಧತೆ:
ರಾಜ್ಯಪಾಲರ ಭೇಟಿಯ ಬಳಿಕ ಜೂನ್ 3ರಂದು ನಡೆಯಲಿರುವ ಸರಳ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜಭವನ ಹಾಗೂ ಲೋಕಭವನದ ಆವರಣದಲ್ಲಿ ಪೂರ್ವಭಾವಿ ಸಿದ್ಧತೆಗಳು ಅಧಿಕೃತವಾಗಿ ಚುರುಕುಗೊಂಡಿವೆ.
CUET (UG) 2026 ಪರೀಕ್ಷೆಯಲ್ಲಿ ತಾಂತ್ರಿಕ ದೋಷ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಯ ಅವಕಾಶ ಪ್ರಕಟಿಸಿದ NTA
ನೆಚ್ಚಿನ ನಾಯಕನ ‘ಸಿಎಂ ಪಟ್ಟ’ಕ್ಕಾಗಿ 3 ವರ್ಷಗಳ ‘ತಪಸ್ಸು’: ಕೊನೆಗೂ ಫಲಿಸಿತು ‘ಡಿಕೆಶಿ ಅಭಿಮಾನಿ’ಯ ಸಂಕಲ್ಪ!








