Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Facebook Twitter Instagram
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Home»KARNATAKA»ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಸಿದ್ದು: ಬಿಜೆಪಿ ಜಾಹೀರಾತು ರಾಜ್ಯಕ್ಕೆ ಅವಮಾನವೆಂದು ಕಿಡಿ
    KARNATAKA

    ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಸಿದ್ದು: ಬಿಜೆಪಿ ಜಾಹೀರಾತು ರಾಜ್ಯಕ್ಕೆ ಅವಮಾನವೆಂದು ಕಿಡಿ

    By KNN IT TEAMJune 02, 11:50 am

    ಬೆಂಗಳೂರು: ಕೇಂದ್ರ ಸರ್ಕಾರ ( Union Government ) ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ( BJP ) ನೀಡುತ್ತಿರುವ ಜಾಹಿರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ. ಕೊಡುಗೆ ಎಂಬ ಪದ ಬಳಸಿ ಜಾಹಿರಾತು ನೀಡುತ್ತಿರುವುದು ಸರಿಯಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ( Ex CM Siddaramaiah ) ರಾಜ್ಯ ಸರ್ಕಾರದ ( Karnataka Government ) ವಿರುದ್ಧ ಗುಡುಗಿದ್ದಾರೆ.

    ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯ ಮತ್ತು ಕೇಂದ್ರದ ಬಿಜೆಪಿಯವರು ನಮ್ಮ ರಾಜ್ಯದ ಜನರನ್ನೇನು ದಡ್ಡರು, ಯೋಚಿಸುವ ಶಕ್ತಿ ಇಲ್ಲದವರು ಎಂದುಕೊಂಡಿದ್ದಾರಾ? ಈ ಬಿಜೆಪಿಯವರ ತಲೆ ಸರಿ ಇದೆಯಾ? 2014 ರಿಂದ ಇದುವರೆಗೆ 8 ವರ್ಷಗಳಲ್ಲಿ ರಾಜ್ಯಕ್ಕೆ 1,29 ಲಕ್ಷ ಕೋಟಿ ರೂಗಳನ್ನು ನರೇಂದ್ರ ಮೋದಿಯವರು “ಕೊಡುಗೆ” ನೀಡಿದ್ದಾರೆ ಎಂದು ಪ್ರತಿ ನಿತ್ಯ ಜಾಹಿರಾತು ನೀಡಲಾಗುತ್ತಿದೆ. ಕೊಡುಗೆ ಎಂಬ ಪದ ಬಳಸಲು ಮೋದಿಯವರೊ ಇಲ್ಲ ಬಿಜೆಪಿಯವರೊ ಅವರ ಸ್ವಂತ ಮನೆಯಿಂದ ತೆಗೆದು ಖುಷಿಗೆ ಗಿಫ್ಟು ಕೊಡುವಂತೆ ಏನಾದರೂ ರಾಜ್ಯಕ್ಕೆ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.

    BREAKING NEWS: ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಗೆ ಎದುರಾದ ಆಪರೇಷನ್ ಕಮಲದ ಭೀತಿ, ರೆಸಾರ್ಟ್ ಗೆ ಶಾಸಕರು ಶಿಫ್ಟ್.!

    ರಾಜ್ಯದ ಬಿಜೆಪಿ ಸರ್ಕಾರಕ್ಕೆ ಏನಾದರೂ ಬೆನ್ನು ಮೂಳೆ ಇದ್ದರೆ ಮೊದಲು ಈ ಜಾಹಿರಾತಿಗೆ ವಿರೋಧ ವ್ಯಕ್ತಪಡಿಸಬೇಕಾಗಿತ್ತು. ಯಾಕೆಂದರೆ ಕಳೆದ 8 ವರ್ಷಗಳಲ್ಲಿ ಮೋದಿಯವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಈ 8 ವರ್ಷಗಳಲ್ಲಿ ನಮ್ಮ ರಾಜ್ಯದಿಂದ ಕನಿಷ್ಟ ಎಂದರೂ 19000000000000 [19 ಲಕ್ಷ ಕೋಟಿ] ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ಒಂದರ್ಥದಲ್ಲಿ ದೋಚಿಕೊಂಡಿದೆ ಎಂದರೂ ಸರಿಯೆ. ಇಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸಿ ಟಿಪ್ಸು ಕೊಟ್ಟಂತೆ ಕೆಲವು ಯೋಜನೆಗಳಿಗೆ ಕೊಟ್ಟಿರುವ 1.29 ಲಕ್ಷ ಕೋಟಿ ಅನುದಾನಗಳನ್ನು ಕೊಡುಗೆ ಎಂದು ಹೇಳಿ ರಾಜ್ಯದ ಸ್ವಾಭಿಮಾನವನ್ನು ದೆಲ್ಲಿಯ ಕಾಲ ಕೆಳಗೆ ಹಾಕಿರುವ ರಾಜ್ಯ ಬಿಜೆಪಿಗರಿಗೆ ಸ್ವಾಭಿಮಾನ ಎಂಬುದು ಏನಾದರೂ ಇದೆಯೆ? ಎಂಬ ಪ್ರಶ್ನೆಯನ್ನು ಈ ನಾಡಿನ ಪ್ರಜ್ಞಾವಂತರು ಕೇಳುತ್ತಿದ್ದಾರೆ. ಇದರಲ್ಲಿ ನರೇಗ ಯೋಜನೆಯಲ್ಲಿ ಜನರು ಕೂಲಿ ಮಾಡಿದ ಹಣ 27418 ಕೋಟಿಗಳಷ್ಟಿದೆ. ಹಾಗೆಯೇ ಜನರ ವಿಮೆ ಹಣ ಮುಂತಾದವುಗಳೆಲ್ಲ ಈ ಕೊಡುಗೆಯಲ್ಲಿ ಸೇರಿವೆ. ನರೇಗಾ ಮುಂತಾದ ಯೋಜನೆಗಳಲ್ಲಿ ಜನರ ಬೆವರಿಗೆ ಕೊಡುವ ಪ್ರತಿಫಲವನ್ನು ಈ ಬಿಜೆಪಿಯವರು ಕೊಡುಗೆ ಎನ್ನುತ್ತಾರಲ್ಲ, ಇವರು ಮನುಷ್ಯರಾ ಎಂಬುದು ನನ್ನ ಅನುಮಾನ ಎಂದು ಹೇಳಿದರು.

    ಕರ್ನಾಟಕವು ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಎರಡನೆ ರಾಜ್ಯ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಜಿಎಸ್‍ಟಿ ಪಾವತಿಸುತ್ತಿರುವ ರಾಜ್ಯ ನಮ್ಮದು. ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆಯ ಪಾವತಿಯಲ್ಲೂ ಸಹ ನಮ್ಮ ರಾಜ್ಯವು ನಿರಂತರವಾಗಿ ಎರಡು ಅಥವಾ ಮೂರನೆ ಸ್ಥಾನದಲ್ಲಿದೆ. ನನ್ನ ಬಳಿ ಆದಾಯ ತೆರಿಗೆ ಇಲಾಖೆಯ 2018-19 ರ ಅಧಿಕೃತ ದಾಖಲೆ ಇದೆ. ಅದರ ಪ್ರಕಾರ ಮಹಾರಾಷ್ಟ್ರ ರಾಜ್ಯವು 4.25 ಲಕ್ಷ ಕೋಟಿ ರೂಗಳಷ್ಟನ್ನು ನೇರ ತೆರಿಗೆಯ ರೂಪದಲ್ಲಿ ಪಾವತಿಸುತ್ತಿದೆ. ದೆಹಲಿಯು 1.66 ಲಕ್ಷ ಕೋಟಿಗಳನ್ನು ಪಾವತಿಸಿತ್ತು. ನಮ್ಮ ರಾಜ್ಯದಿಂದ 1.20 ಲಕ್ಷ ಕೋಟಿಗಳನ್ನು ಕೇಂದ್ರವು ನೇರ ತೆರಿಗೆಯ ಮೂಲಕ ಸಂಗ್ರಹಿಸಿತ್ತು. ಪ್ರಸ್ತುತ ಕರ್ನಾಟಕವು 1.40 ಲಕ್ಷ ಕೋಟಿಗಳಷ್ಟು ನೇರ ತೆರಿಗೆಯನ್ನು [ಆದಾಯ ಮತ್ತು ಕಾರ್ಪೊರೇಟ್ ತೆರಿಗೆ] ಯನ್ನು ಪಾವತಿಸುತ್ತಿದೆ. ಉಳಿದಂತೆ ಗುಜರಾತ್ ಮಾಡೆಲ್ ಎಂದು ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿಯವರ ರಾಜ್ಯವಾದ ಗುಜರಾತು 2018-19 ರಲ್ಲಿ ಪಾವತಿಸಿದ್ದು ಕೇವಲ 49 ಸಾವಿರ ಕೋಟಿ ಮಾತ್ರ. ಆಂಧ್ರ ಪ್ರದೇಶ 46 ಸಾವಿರ ಕೋಟಿ, ಮಧ್ಯಪ್ರದೇಶ 19.7 ಸಾವಿರ ಕೋಟಿ, ಬಿಹಾರ 6.2 ಸಾವಿರ ಕೋಟಿ, ರಾಜಸ್ತಾನ 21 ಸಾವಿರ ಕೋಟಿ, ಉತ್ತರ ಪ್ರದೇಶ 27 ಸಾವಿರ ಕೋಟಿ ಮಾತ್ರ. ತಮಿಳುನಾಡು 74.3 ಸಾವಿರ ಕೋಟಿ ಪಾವತಿಸಿತ್ತು ಎಂದರು.

    IAF Recruitment 2022: ‘ದ್ವಿತೀಯ ಪಿಯು ಪಾಸ್’ ಆಗಿದ್ದೀರಾ.? ಹಾಗಿದ್ದರೇ.. ‘ಭಾರತೀಯ ವಾಯುಪಡೆ’ಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

    2018-19 ರ ಮಾಹಿತಿಯ ಪ್ರಕಾರ ದೇಶದ ಬೊಕ್ಕಸಕ್ಕೆ ನೇರ ತೆರಿಗೆಯ ಮೂಲಕ 11.37 ಲಕ್ಷ ಕೋಟಿ ರೂ ತೆರಿಗೆ ಸಂದಾಯವಾಗಿದ್ದರೆ ಮಹಾರಾಷ್ಟ್ರವೂ ಸೇರಿದಂತೆ ದಕ್ಷಿಣದ 6 ರಾಜ್ಯಗಳು ದೇಶದ ಬೊಕ್ಕಸಕ್ಕೆ 6.96 ಲಕ್ಷ ಕೋಟಿ ರೂಗಳನ್ನು ಪಾವತಿಸಿದ್ದವು. ಇದು ಒಟ್ಟು ನೇರ ತೆರಿಗೆಯಲ್ಲಿ ಶೇ.62 ರಷ್ಟಾಗುತ್ತದೆ. ಜಿ.ಎಸ್.ಟಿ ಯಲ್ಲಿ 2022 ರ ಏಪ್ರಿಲ್ ತಿಂಗಳ ಉದಾಹರಣೆಯೊಂದನ್ನೆ ತೆಗೆದುಕೊಂಡರೆ ಮಹಾರಾಷ್ಟ್ರ ರೂ.27.5 ಸಾವಿರ ಕೋಟಿ, ಕರ್ನಾಟಕ ರೂ.11.82 ಸಾವಿರ ಕೋಟಿ, ಉತ್ತರ ಪ್ರದೇಶ ರೂ.8.5 ಸಾವಿರ ಕೋಟಿ, ರಾಜಸ್ತಾನ ರೂ.4.5 ಸಾವಿರ ಕೋಟಿ, ಮಧ್ಯಪ್ರದೇಶ ರೂ.3.3 ಸಾವಿರ ಕೋಟಿ, ಬಿಹಾರ ರೂ.1.4 ಸಾವಿರ ಕೋಟಿ, ಆಂಧ್ರ ಮತ್ತು ತೆಲಂಗಾಣ ಗಳೆರಡು ರೂ.9.00 ಸಾವಿರ ಕೋಟಿ ಮಾತ್ರ ಪಾವತಿಸಿವೆ. ಈ ವಿಚಾರದಲ್ಲೂ ಸರಿಸುಮಾರು ಶೇ.50 ರಷ್ಟು ತೆರಿಗೆಯನ್ನು ದಕ್ಷಿಣದ ರಾಜ್ಯಗಳು 6 ರಾಜ್ಯಗಳು ಪಾವತಿಸುತ್ತಿವೆ ಎಂದು ತಿಳಿಸಿದರು.

    ಕಳೆದ 8 ವರ್ಷಗಳಿಂದ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರವು ಕರ್ನಾಟಕ ರಾಜ್ಯವೊಂದರಿಂದಲೆ ಸುಮಾರು ರೂ.19 ಲಕ್ಷ ಕೋಟಿಗಳನ್ನು ನೇರ ಮತ್ತು ಪರೋಕ್ಷ ತೆರಿಗೆಗಳ ರೂಪದಲ್ಲಿ ಕೇಂದ್ರ ಸರ್ಕಾರವು ಸಂಗ್ರಹಿಸಿದೆ. ಕಳೆದ ವರ್ಷ ಕೋವಿಡ್ ಸಂದರ್ಭದಲ್ಲೂ ಕೂಡಾ ಸುಮಾರು ರೂ.3 ಲಕ್ಷ ಕೋಟಿಗಳನ್ನು ಕೇಂದ್ರ ಸರ್ಕಾರ ನಮ್ಮ ರಾಜ್ಯದಿಂದ ಸಂಗ್ರಹಿಸಿದೆ. ಮನಮೋಹನಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ನಮ್ಮ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯಿಂದ 2012 ಮತ್ತು 2013 ರ ಸಾಲಿನಲ್ಲಿ ಮೂರೂವರೆ ಸಾವಿರ ಕೋಟಿಗಳನ್ನು ಮಾತ್ರ ಸಂಗ್ರಹಿಸಿದ್ದರು. ಮೋದಿಯವರು ಪ್ರಧಾನಿಗಳಾದ ಮೇಲೆ ನಮ್ಮ ರಾಜ್ಯದಿಂದ ವರ್ಷಕ್ಕೆ 35000 ಗಳಿಂದ 40000 ಕೋಟಿಗಳನ್ನು ಸಂಗ್ರಹಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬಾಬತ್ತಿನಿಂದಲೆ ಮೋದಿಯವರ ಸರ್ಕಾರ ಕರ್ನಾಟಕ ರಾಜ್ಯದಿಂದ ಕನಿಷ್ಟ ಎಂದರೂ 150000 ಕೋಟಿ ರೂಗಳನ್ನು ದೋಚಿಕೊಂಡಿದೆ ಎಂದು ಕಿಡಿಕಾರಿದರು.

    BREAKING NEWS: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‘ಹಿಜಾಬ್ ಧರಿಸಿ’ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಅಮಾನತು | Hijab Row

    ಇಷ್ಟಾದರೂ ರಾಜ್ಯ , ಕೇಂದ್ರ ಬಿಜೆಪಿ ಸರ್ಕಾರಗಳು ಬಿಡುಗಡೆ ಮಾಡಿರುವ ಜಾಹಿರಾತಿನಲ್ಲಿ 2014 ರಿಂದ 2022 ರವರೆಗೆ ರೂ.1,29,776/- ಕೋಟಿ ರೂಗಳನ್ನು ಕೇಂದ್ರದ ವಿವಿಧ ಯೋಜನೆಗಳಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದು ರಾಜ್ಯವು ಪಾವತಿಸಿದ ಒಟ್ಟು ತೆರಿಗೆಯಲ್ಲಿ ಶೇ.6.8 ರಷ್ಟು ಮಾತ್ರ ನಮ್ಮ ರಾಜ್ಯದಲ್ಲಿ ಖರ್ಚು ಮಾಡಿದ್ದಾರೆ ಎಂದು ಅರ್ಥ. ಇದರ ನಂತರ ರೂ.2,14,603/- ಕೋಟಿಗಳನ್ನು ತೆರಿಗೆ ಪಾಲಿನ ರೂಪದಲ್ಲಿ ಹಂಚಿಕೆ ಮಾಡಿದ್ದಾರೆ. ಇದು ರಾಜ್ಯದಿಂದ ಸಂಗ್ರಹಿಸಿದ ತೆರಿಗೆಯಲ್ಲಿ ಶೇ.11.29 ರಷ್ಟು ಮಾತ್ರ ಎಂದು ವಾಗ್ದಾಳಿ ನಡೆಸಿದರು.

    ಈ ರೂ.19 ಲಕ್ಷ ಕೋಟಿಗಳಲ್ಲಿ ತೆರಿಗೆ ಹಂಚಿಕೆ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಹಾಗೂ ಇತರೆ ಯೋಜನಾ ಆಯೋಗದ ಅನುದಾನಗಳ ರೂಪದಲ್ಲಿ (ಕೇಂದ್ರ ಇಲಾಖೆಗಳು ತೆಗೆದುಕೊಳ್ಳುವ ಕಾಮಗಾರಿಗಳು, ಕಾರ್ಯಕ್ರಮಗಳನ್ನು ಹೊರತುಪಡಿಸಿ) ನಮಗೆ ಬರಬೇಕಾಗಿದ್ದ ಅನುದಾನ ಶೇ.42 ರ ಅನುಪಾತದಲ್ಲಿ ರೂ.8 ಲಕ್ಷ ಕÉೂೀಟಿ ರೂಗಳಷ್ಟಾಗಬೇಕು ಎಂದರು.

    ಇದಲ್ಲದೆ ರಾಜ್ಯಗಳಿಗೆ ಹಂಚಿಕೆ ಮಾಡಿದ ನಂತರ ಕೇಂದ್ರವೆ ತನ್ನ ಬಳಿ ಉಳಿಸಿಕೊಳ್ಳುವ ಶೇ. 58 ಕ್ಕೂ ಹೆಚ್ಚಿನ ಅನುದಾನವಿದೆಯಲ್ಲ, ಅದರಲ್ಲಿ ಅದರ ಇಲಾಖೆಗಳ ಮೂಲಕ ರಾಜ್ಯಕ್ಕೆ ಬೇರೆ ಬೇರೆ ಯೋಜನೆಗಳಿಗಳಿಗಾಗಿ ಬಿಡುಗಡೆ ಮಾಡಿದ್ದೆ ಈ 1.29 ಲಕ್ಷ ಕೋಟಿ. ಇದನ್ನೆ ಅವರು ಜಾಹಿರಾತಿನಲ್ಲಿ ಹೇಳಿಕೊಳ್ಳುತ್ತಿರುವುದು. ರಾಜ್ಯದ ಮೇಲಿನ ಬಿಜೆಪಿಯವರ ಕ್ರೌರ್ಯವನ್ನು ಯಾವ ಮಾತುಗಳಲ್ಲಿ ವಿವರಿಸಬೇಕು ಹೇಳಿ ಎಂದು ಪ್ರಶ್ನಿಸಿದ್ದಾರೆ.

    ಜಿಎಸ್‍ಟಿಯಂಥ ಅಪಕ್ವ ಯೋಜನೆಯನ್ನು ಅನುಷ್ಠಾನ ಮಾಡುವುದಕ್ಕೆ ಮೊದಲು ನಮ್ಮ ರಾಜ್ಯದ ತೆರಿಗೆ ಸಂಗ್ರಹದ ಪ್ರಮಾಣ ಶೇ.14 ರಿಂದ ಶೇ.15 ರಷ್ಟಿತ್ತು.
    2015-16 ರಲ್ಲಿ ನಮ್ಮ ಒಟ್ಟು ತೆರಿಗೆ ಸಂಗ್ರಹ ರೂ.1,18,817 ಕೋಟಿಗಳಷ್ಟಿತ್ತು. ಇದು ಶೇ.14 ರ ಪ್ರಮಾಣದಲ್ಲಿ ಬೆಳವಣಿಗೆಯಾಗಿದ್ದರೆ ಈ ವರ್ಷ ನಮ್ಮ ತೆರಿಗೆ ಸಂಗ್ರಹದ ಪ್ರಮಾಣ ರೂ.297,315 ಕೋಟಿಗಳಷ್ಟಿರಬೇಕಿತ್ತು. ಆದರೆ ಈ ವರ್ಷ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ರೂ.1,89,887 ಕೋಟಿಗಳಷ್ಟು ತೆರಿಗೆ ಸಂಗ್ರಹವಾಗಬಹುದು ಎಂದು ಅಂದಾಜಿಸಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರದ ಅಡ್ಡ ಕಸುಬಿ ಆರ್ಥಿಕ ನೀತಿಗಳಿಂದಾಗಿ ರಾಜ್ಯವು ಈ 8 ವರ್ಷಗಳಲ್ಲಿ ಕಳೆದುಕೊಂಡದ್ದು ರೂ.2,96,000/- ಕೋಟಿಗಳಷ್ಟು. ಕಳೆದ 8 ವರ್ಷಗಳ ಸರಾಸರಿ ತೆರಿಗೆ ಸಂಗ್ರಹ ಪ್ರಮಾಣ ಶೇ.6 ರಷ್ಟು ಮಾತ್ರ ಇದೆ. ಇದರಿಂದಾಗಿ ರಾಜ್ಯದ ಆರ್ಥಿಕತೆ ಸಂಕಷ್ಟದ ಸುಳಿಗೆ ಸಿಲುಕಿ ಸಾಲಗಾರ ರಾಜ್ಯವಾಗುತ್ತಿದೆ. ಇದರ ಜೊತೆಗೆ ಬಿಜೆಪಿಯವರ 40 ಪರ್ಸೆಂಟ್ ಕಮಿಷನ್‍ನಿಂದಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದು ಕಿಡಿಕಾರಿದರು.


    breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka government karnataka latest news karnataka news karnataka politics latest news siddaramaiah
    best web service company
    Share. Facebook Twitter LinkedIn WhatsApp Email

    Related Posts

    BIG NEWS: ಹೆಂಡತಿ ಕಾಟ ತಾಳಲಾರದೇ 26 ಲಕ್ಷ ಹಣದೊಂದಿಗೆ ಗೋವಾಕ್ಕೆ ಹೊರಟ ಗುತ್ತಿಗೆದಾರ: ಮುಂದೆ ಆಗಿದ್ದೇನು ಗೊತ್ತ?

    April 01, 9:51 pm

    ರಾಯಚೂರು ಜಿಲ್ಲೆಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 32.42 ಲಕ್ಷ ಹಣ ಸೀಜ್

    April 01, 9:22 pm

    BREAKING NEWS: ಕಲಬುರ್ಗಿಯ ಹಳೆ ಮಹಾನಗರ ಪಾಲಿಕೆ ಕಟ್ಟಡದಲ್ಲಿ ಅಗ್ನಿ ಅವಘಡ: ಹಳೇ ದಾಖಲೆಗಳು ಬೆಂಕಿಗಾಹುತಿ

    April 01, 9:20 pm
    Recent News

    ಟೆಕ್ ದೈತ್ಯ ‘ಗೂಗಲ್’ ಉದ್ಯೋಗಿಗಳಿಗೆ ಮತ್ತೊಂದು ಶಾಕ್ ; ವಜಾ ಆಯ್ತು, ಈಗ ಉಚಿತ ‘ಪಾನೀಯ, ತಿಂಡಿ’ಗೂ ಬ್ರೇಕ್

    April 01, 10:09 pm

    Beauty Tips : ಹೊಳೆಯುವ ‘ಚರ್ಮ’ ಪಡೆಯಲು ಈ ಸೌಂದರ್ಯ ‘ರಹಸ್ಯ’ಗಳನ್ನು ಅನುಸರಿಸಿ

    April 01, 9:57 pm

    BIG NEWS: ಹೆಂಡತಿ ಕಾಟ ತಾಳಲಾರದೇ 26 ಲಕ್ಷ ಹಣದೊಂದಿಗೆ ಗೋವಾಕ್ಕೆ ಹೊರಟ ಗುತ್ತಿಗೆದಾರ: ಮುಂದೆ ಆಗಿದ್ದೇನು ಗೊತ್ತ?

    April 01, 9:51 pm

    “ಮುಖ್ಯವಾಹಿನಿಗೆ ಹಿಂತಿರುಗಿ” ; ‘ಈಶಾನ್ಯ ಉಗ್ರ’ರಿಗೆ ಪ್ರಜಾಪ್ರಭುತ್ವದ ಭಾಗವಾಗುವಂತೆ ‘ಅಮಿತ್ ಶಾ’ ಕರೆ

    April 01, 9:40 pm
    State News
    KARNATAKA

    BIG NEWS: ಹೆಂಡತಿ ಕಾಟ ತಾಳಲಾರದೇ 26 ಲಕ್ಷ ಹಣದೊಂದಿಗೆ ಗೋವಾಕ್ಕೆ ಹೊರಟ ಗುತ್ತಿಗೆದಾರ: ಮುಂದೆ ಆಗಿದ್ದೇನು ಗೊತ್ತ?

    By kannadanewsliveApril 01, 9:51 pm0

    ಬೆಳಗಾವಿ: ಆ ಗುತ್ತಿಗೆದಾರ ಹೆಂಡತಿಯ ಕಾಟದಿಂದ ಬೇಸತ್ತಿದ್ದನು. ಇದೇ ಕಾರಣದಿಂದಾಗಿ ಗೋವಾದ ಕ್ಯಾಸಿನೋಗೆ ತೆರಳೋ ಯೋಜನೆಯಲ್ಲಿ 26 ಲಕ್ಷ ಹಣವನ್ನು…

    ರಾಯಚೂರು ಜಿಲ್ಲೆಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 32.42 ಲಕ್ಷ ಹಣ ಸೀಜ್

    April 01, 9:22 pm

    BREAKING NEWS: ಕಲಬುರ್ಗಿಯ ಹಳೆ ಮಹಾನಗರ ಪಾಲಿಕೆ ಕಟ್ಟಡದಲ್ಲಿ ಅಗ್ನಿ ಅವಘಡ: ಹಳೇ ದಾಖಲೆಗಳು ಬೆಂಕಿಗಾಹುತಿ

    April 01, 9:20 pm

    ಬಿಜೆಪಿ ಅಚ್ಛೆ ದಿನಗಳ ಹೆಸರು ಹೇಳಿ ದುಬಾರಿ ದಿನಗಳನ್ನು ಕೊಟ್ಟು ಜನರನ್ನು ಫೂಲ್ ಮಾಡಿದೆ – ಕಾಂಗ್ರೆಸ್ ಕಿಡಿ

    April 01, 8:55 pm

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2023 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.