ಶಿವಮೊಗ್ಗ: ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದಂತ ಮಾತುಗಳು ವೈರಲ್ ಆದ ಬೆನ್ನಲ್ಲೇ, ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು ವಿಷಾದ ವ್ಯಕ್ತ ಪಡಿಸಿದ್ದಾರೆ.
ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಿನಾಂಕ 31/1/26 ರಂದು ಹೊನ್ನಾವರ ತಾಲೂಕಿನಲ್ಲಿ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ನೆಡದ ನನ್ನ ಮಾತು ಯಾವುದೇ ಸಮುದಾಯವನ್ನು ಅವಹೇಳನ ಮಾಡಲು ಆಡಿದ ಮಾತು ಆಗಿರುವುದಿಲ್ಲ. ಒಂದು ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ ಸಂದರ್ಭದಲ್ಲಿ ನಾನು ಕಟ್ಟಿದ ದೇವಸ್ಥಾನದಲ್ಲಿ ಕೆಲವು ವ್ಯಕ್ತಿಗಳಿಂದ ಆದ ನೋವನ್ನು ನಮ್ಮ ಅಡು ಭಾಷೆಯಲ್ಲಿ ವ್ಯಕ್ತಪಡಿಸಿದೆ ಎಂಬುದಾಗಿ ಹೇಳಿದ್ದಾರೆ.
ನಾನು ಆಡಿದಂತ ಮಾತಿನಿಂದ ಯಾವುದೇ ಸಮುದಾಯಕ್ಕೆ ನೋವು ಆಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ವಿಶೇಷವಾಗಿ ಬ್ರಾಹ್ಮಣ ಸಮುದಾಯದ ಮೇಲೆ ನನಗೆ ಮೊದಲಿನಿಂದಲೂ ಅಪಾರವಾದ ಗೌರವ ಇದೆ. ಯಾರು ಸಹ ಅನ್ಯತಾ ಭಾವಿಸಬಾರದು ಎಂಬುದಾಗಿ ವಿನಂತಿಸಿದ್ದಾರೆ.
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು
ಮತ್ತೊಂದೆಡೆ ಬ್ರಾಹ್ಮಣರ ಸಮುದಾಯ ಕುರಿತಂತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದಂತ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ ವಿರುದ್ಧ ಸಾಗರದ ಸಹಾಯಕ ಉಪ ಪೊಲೀಸ್ ಅಧೀಕ್ಷಕರಿಗೆ ತ್ರಿಮತಸ್ಥ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ ದೂರು ನೀಡಿದೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸಹಾಯಕ ಉಪ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿದಂತ ಸಾಗರದ ತ್ರಿಮತಸ್ಥ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ ನ ಅಧ್ಯಕ್ಷರಾದಂತ ರಾಜೇಂದ್ರ ಪ್ರಸಾದ್ ಹಾಗೂ ಸಮುದಾಯದ ಮುಖಂಡರು ತೆರಳಿ ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು








