ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಜ್ಯೋತಿ ಯೋಜನೆಯೂ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ನೋಂದಾಯಿತ ಜನರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ದೊರೆಯುತ್ತಿದೆ. ಈಗಾಗಲೇ ಈ ಗೃಹ ಜ್ಯೋತಿ ಯೋಜನೆಗೆ ( Gruha Jyothi Scheme ) ರಾಜ್ಯದ ಕೋಟ್ಯಂತರ ಜನರು ನೋಂದಾಯಿಸಿಕೊಂಡಿದ್ದಾರೆ. ಇನ್ಮುಂದೆ ನೋಂದಾಯಿಸಿಕೊಳ್ಳೋರಿಗೆ ಸೇವಾ ಸಿಂಧು ಪೋರ್ಟಲ್ ಬದಲಾಗಿ ಮತ್ತೊಂದು ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು; ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಅದರಂತೆ, ಸರ್ಕಾರಿ ಆದೇಶ ಸಂಖ್ಯೆ: ಎನರ್ಜಿ/164/ಪಿಎಸ್‌ಆರ್/2023, ದಿನಾಂಕ: 05.06.2023 ರಲ್ಲಿ ಹೊರಡಿಸಿದೆ.
ಗೃಹ ಜ್ಯೋತಿ” ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ತಂತ್ರಾಂಶದ ಮೂಲಕ ನೊಂದಣಿ ಮಾಡಬಹುದಾಗಿರುತ್ತದೆ. ಆದರೆ, ಸೇವಾ ಸಿಂಧು ತಂತ್ರಾಂಶದಲ್ಲಿ ಗ್ರಾಹಕರನ್ನು De-Link ಮಾಡುವ ಸೌಲಭ್ಯವನ್ನು ಪ್ರಸ್ತುತ ಕಲ್ಪಿಸಿರುವುದಿಲ್ಲ. ಗ್ರಾಹಕರು ತಮ್ಮ ಮನೆಯನ್ನು ಬದಲಾಯಿಸಿದಂತಹ ಸಂದರ್ಭದಲ್ಲಿ ಹಾಗೂ ಇತರೆ ಸಂದರ್ಭಗಳಲ್ಲಿ ಈಗಾಗಲೇ ಈ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸ್ಥಾವರದಿಂದ ಸ್ಥಗಿತಗೊಳಿಸಿ ಮತ್ತೊಂದು ಸ್ಥಾವರಕ್ಕೆ ಹೊಸದಾಗಿ ನೊಂದಣಿ ಮಾಡಿಕೊಳ್ಳುವ ಸೌಲಭ್ಯ ಕಲ್ಪಿಸಲು De-Link ಅವಕಾಶ ಮಾಡಿಕೊಡಬೇಕಾಗುತ್ತದೆ. ಆದ್ದರಿಂದ, ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳು ಈ ಸಂಬಂಧ, ಮುಂದಿನ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.
ನಾಳೆ ಬೆಂಗಳೂರಲ್ಲಿ ‘ರಾಜ್ಯಮಟ್ಟದ ಜನತಾದರ್ಶನ’: ಈ ‘ಸಂಚಾರ ಮಾರ್ಗ’ ಬದಲಾವಣೆ
BREAKING: ‘ಉತ್ತರಾಖಂಡ ವಿಧಾನಸಭೆ’ಯಲ್ಲಿ ‘ಏಕರೂಪ ನಾಗರಿಕ ಸಂಹಿತೆ ಮಸೂದೆ'(UCC) ಅಂಗೀಕಾರ | UCC Bill