ಬೆಂಗಳೂರು: CRP/BRP/E.C.O ನಿರ್ದಿಷ್ಟ ಪಡಿಸಿದ ಹುದ್ದೆಗಳಿಗೆ ಕೆಲವು ಅಂಶಗಳನ್ನು ಸೇರ್ಪಡೆಗೊಳಿಸಿ ಆದೇಶಿಸಲಾಗಿದೆ. ಈ ಮೂಲಕ ಸಿಆರ್ ಪಿ, ಬಿ ಆರ್ ಪಿ, ಇಸಿಒ ಹುದ್ದೆಗೆ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ನಿರ್ದಿಷ್ಟ ಪಡಿಸಿದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅರ್ಜಿ ಸಲ್ಲಿಸಲು ಕನಿಷ್ಠ 10 ವರ್ಷಗಳ ಸೇವೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸರಬೇಕು ಎಂಬುದಾಗಿ ತಿಳಿಸಿದೆ.
ಇನ್ನೂ ಲಿಖಿತ ಪರೀಕ್ಷೆಯಲ್ಲಿ ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಪತ್ರಿ ಪತ್ರಿಕೆಯಲ್ಲಿ ಕನಿಷ್ಟ ಶೇಕಡಾ 40 ಅಂಕಗಳನ್ನು ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2 ಈ ಎರಡೂ ಪತ್ರಿಕೆಗಳಿಂದ ಸರಾಸರಿ ಶೇ.50 ಅಂಕ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದಿದ್ದಾರೆ.
ಇನ್ನೂ ಪ್ರಾಥಮಿಕ ವಿಭಾಗದ ಶಿಕ್ಷಣ ಸಂಯೋಜಕರ ಹುದ್ದೆಗೆ ಗರಿಷ್ಟ 57 ವರ್ಷಗಳ ವಯೋಮಿತಿ ಮೀರಿರಬಾರದು. ಅದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿರುವ ಕನಿಷ್ಟ ಸೇವಾವಧಿಯಿಂದ ವಿನಾಯ್ತಿ ನೀಡಲಾಗಿದೆ ಎಂದು ಹೇಳಲಾಗಿದೆ.
BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ
BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ