ಬೆಂಗಳೂರು: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ 2013ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಕರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳಿಗೆ ಪತ್ರದಲ್ಲಿ ಖಡಕ್ ನಿರ್ದೇಶನ ನೀಡಿದ್ದಾರೆ.
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ(ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಗೆ ಸಂಬಂಧಿಸಿದಂತೆ, ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪ್ರಕರಣದ ಸಂಖ್ಯೆ:2482/2014ರ ಪ್ರಕರಣದಲ್ಲಿ ಸೂಕ್ತ ನಿರ್ದೇಶನಗಳನ್ನು ನೀಡಿ ಕ್ರಮ ಕೈಗೊಳ್ಳಲು ಸೂಚನೆಯನ್ನು ನೀಡಲಾಗಿರುತ್ತದೆ. ಅದರಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ಹಾಗೂ ಸೂಕ್ತ ಕ್ರಮ ಕೈಗೊಳ್ಳಲು ಉಲ್ಲೇಖಿತ(2)ರ ಪತ್ರದಲ್ಲಿ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ.
ಮುಂದುವರೆದು, ಕಾರ್ಯದರ್ಶಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ನವದೆಹಲಿ, ರವರ ಉಲ್ಲೇಖ(3)ರ ಪತ್ರದಲ್ಲಿ ಈ ಕೆಳಕಂಡ ಮಾಹಿತಿಯನ್ನು ಆದ್ಯತೆ ಮೇರೆಗೆ Sle-Box Portal ನಲ್ಲಿ ಇಂಧೀಕರಿಸುವಂತೆ ತಿಳಿಸಲಾಗಿದೆ.
- ಇಲಾಖೆ/ಸಚಿವಾಲಯದಲ್ಲಿ ಕಾಯ್ದೆಯ ಅನುಷ್ಠಾನಕ್ಕಾಗಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದು ಮತ್ತು ಅಧೀನ ಕಛೇರಿ/ಸಂಸ್ಥೆಗಳ (ಸರ್ಕಾರಿ ಮತ್ತು ಖಾಸಗಿ ಮಾಹಿತಿ ಮತ್ತು ಆಂತರಿಕ ದೂರು ಸಮಿತಿಯ ಮಾಹಿತಿಯನ್ನು Sle-Box Portal ನಲ್ಲಿ ಅಳವಡಿಸುವುದು.
- ಪೋರ್ಟಲ್ನಲ್ಲಿ/ನೇರವಾಗಿ ಸ್ವೀಕರಿಸಿದ ದೂರುಗಳ ವಿಲೇವಾರಿಯ ವೇಗ ಮತ್ತು ಗುಣಮಟ್ಟವನ್ನು ಮೇಲಿ ಚಾರಣೆ ಮಾಡುವುದು.
- ಇಲಾಖೆಯ ಹಂತದಲ್ಲಿ ಕಾಲಕಾಲಕ್ಕೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ(ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಪರಿಶೀಲನಾ ಸಭೆಗಳನ್ನು ಆಯೋಜಿಸುವುದು.
ಆದ್ದರಿಂದ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ(ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು, ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ಕಾಲಕಾಲಕ್ಕೆ ಮಾಹಿತಿಯನ್ನು ಪೋರ್ಟಲ್ ನಲ್ಲಿ ಅಪ್ಡೇಟ್ ಮಾಡುವುದು ಮತ್ತು ಇನ್ನೂ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡದೇ ಇರುವ ಅಧೀನ ಕಛೇರಿ/ಸಂಸ್ಥೆಗಳಲ್ಲಿ ತುರ್ತಾಗಿ ಸಮಿತಿಯನ್ನು ರಚಿಸಿ, ಕಛೇರಿ/ಸಂಸ್ಥೆಯ ಇತರೇ ಮಾಹಿತಿಯೊಂದಿಗೆ SHe-Box Portal ನಲ್ಲಿ ಇಂಧೀಕರಿಸಲು ಆಧ್ಯತೆಯ ಮೇರೆಗೆ ಸೂಕ್ತ ಕ್ರಮ ಕೈಗೊಳ್ಳಲು ಈ ಮೂಲಕ ಕೋರಿದ್ದಾರೆ.
‘ಬ್ಯಾಂಕ್ ಖಾತೆದಾರ’ರೇ ಹುಷಾರ್.! ಹೀಗೂ ವಂಚಿಸ್ತಾರೆ ‘ಆನ್ ಲೈನ್ ವಂಚಕ’ರು | Cyber Crime
ವಿದ್ಯಾರ್ಥಿಗಳು ಪದವಿಗಳಿಗಷ್ಟೇ ಸೀಮಿತವಾಗದೇ, ಸ್ಪರ್ಧಾತ್ಮಕ ಜಗತ್ತಿಗೆ ಅಣಿಯಾಗಿ: ಸಂಸದ ಸಿ.ಎನ್.ಮಂಜುನಾಥ್