ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಗಳ ಬಂಧನವಾಗಿದ್ದು, ಇದೀಗ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ʻ ಎರಡು ದಿನಗಳಿಂದ ಮಠದಲ್ಲಿ ನೀರವ ಮೌನ ʼವಾಗಿದೆ ಎಂದು ಮುರುಘಾ ಶ್ರೀಗಳ ಬಗ್ಗೆ ಮಠದ ಮಕ್ಕಳು ಬೇಸರ ವ್ಯಕ್ತಪಡಿಸಿದ್ದಾರೆ.
BIGG NEWS : ‘ ಮುರುಘಾ ಮಠಕ್ಕೆ ಸೂಕ್ತ ಭದ್ರತೆ ನೀಡಲಾಗಿದೆ ‘: ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ
ಶ್ರೀಗಳನ್ನು ನೋಡದೇ ಎರಡು ದಿನ ಕಳೆದಿದೆ. ಎರಡು ದಿನಗಳಿಂದ ನಮಗೆ ದೇವರ ದರ್ಶನ ಇಲ್ಲ. ಶ್ರೀಗಳು ಆರೋಪ ಮುಕ್ತರಾಗಿ ಬರುತ್ತಾರೆ ಎಂದು ಮಠದ ವಿದ್ಯಾರ್ಥಿಗಳು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಶ್ರೀಗಳು ನೂರಾರು ಅನಾಥ ಮಕ್ಕಳಿಗೆ ಆಶ್ರಯ ಕೊಟ್ಟಿದ್ದಾರೆ. ತಂದೆ-ತಾಯಿ ಕಳೆದುಕೊಂಡವರಿಗೆ ಶ್ರೀಗಳೇ ತಂದೆ-ತಾಯಿ ಆಗಿದ್ದರು. ಮಠದ ವಿದ್ಯಾರ್ಥಿಗಳ ಬಗ್ಗೆ ಅತೀವ ಕಾಳಜಿ ತೋರಿಸುತ್ತಿದ್ದರು. ಶ್ರೀಗಳ ಪ್ರೀತಿಯನ್ನು ನಾವು ಎರಡು ದಿನಗಳಿಂದ ಕಳೆದುಕೊಂಡಿದ್ದೇವೆ ಎಂದು ದುಃಖದಿಂದ ಮಕ್ಕಳು ನುಡಿದಿದ್ದಾರೆ.
BIGG NEWS : ‘ ಮುರುಘಾ ಮಠಕ್ಕೆ ಸೂಕ್ತ ಭದ್ರತೆ ನೀಡಲಾಗಿದೆ ‘: ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ
ಲೈಂಗಿಕ ಕಿರುಕುಳ ಆರೋಪದಡಿ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಬಳಿಕ ಶ್ರೀಗಳಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಮತ್ತೆ ಈಗ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
BIGG NEWS : ‘ ಮುರುಘಾ ಮಠಕ್ಕೆ ಸೂಕ್ತ ಭದ್ರತೆ ನೀಡಲಾಗಿದೆ ‘: ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ