ಬೆಂಗಳೂರು: ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ( BJP Join ) ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ( BJP State President Nalin Kumar Kateel ) ಅವರು ತಿಳಿಸಿದ್ದಾರೆ.
ಸೈಲೆಂಟ್ ಸುನಿಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ.
BREAKING NEWS : ‘ಹಿಂದೂಗಳ ಹತ್ಯೆಯಾಗುತ್ತದೆ’ ಎಂದ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ದೂರು
ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.
BIGG NEWS : ಮಂಕಿಪಾಕ್ಸ್ಗೆ ‘mpox’ ಎಂದು ಮರುನಾಮಕರಣ : ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ | Monkeypox
ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.