ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ಸ್ಥಾಪನೆಯಾಗಿ 25 ವರ್ಷಗಳು ತುಂಬಿವೆ. ಈ ಹಿನ್ನಲೆಯಲ್ಲಿ ರಜತ ಮಹೋತ್ಸವವನ್ನು ಆಚರಣೆ ಮಾಡಲಾಯಿತು. ಬೃಹತ್ ಸಮಾವೇಶದಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಳ್ಳಿ ಹಬ್ಬದ ಸಂಭ್ರಮದ ಕಾರಣದಿಂದಾಗಿ ಬೆಳ್ಳಿ ನಾಣ್ಯವನ್ನು ಕೂಡ ಬಿಡುಗಡೆ ಮಾಡಲಾಯಿತು.
ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ವೈಎಸ್ ವಿ ದತ್ತ, ಟಿ.ಎ ಶರವಣ, ಹೆಚ್.ಎಂ ರಮೇಶ್ ಗೌಡ ಸೇರಿದಂತೆ ಪಕ್ಷದ ಹಾಲಿ, ಮಾಜಿ ಶಾಸಕರು, ಸಂಸದರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
ರೈತ ಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ, ಜೆಡಿಎಸ್ ಶಾಲು ತಿರುಗಿಸುವ ಮೂಲಕ ದೇವೇಗೌಡ, ಕುಮಾರಸ್ವಾಮಿ ಸೇರಿದಂತೆ ನಾಯಕರು ರಜತ ಮಹೋತ್ಸವವನ್ನು ಸಂಭ್ರಮಾಚರಣೆ ಮಾಡಿದರು.
ಜೆಡಿಎಸ್ ಗೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ ಸೇರಿದಂತೆ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆ ಬಳಿಕ ಬೆಳ್ಳಿ ಹಬ್ಬದ ಸಂಭ್ರಮದ ನೆನಪಿಗಾಗಿ ಬೆಳ್ಳಿ ನಾಣ್ಯವನ್ನು ಬಿಡುಗಡೆ ಮಾಡಲಾಯಿತು.
ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ
‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ








