Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM

‘ಸಿಲಿಂಡರ್ ಖಾಲಿ’ಯಾಗುವ ಆತಂಕವೇ? ಈ 5 ಸರಳ ಸೂತ್ರ ಪಾಲಿಸಿದರೆ ‘ಗ್ಯಾಸ್ ಉಳಿತಾಯ’ ಗ್ಯಾರಂಟಿ!

29/03/2026 6:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ ಘೋಷಣೆ
KARNATAKA

BIG NEWS: ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0905/01/2025 5:15 PM

ದಾವಣಗೆರೆ : ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

537 ನೇ ಕನಕ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ ಏಳೆಗೆಗಾಗಿ ಶ್ರಮಿಸಿ ದಾಸ ಶ್ರೇಷ್ಠರಾದರು ಎಂದರು.

ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ದನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆಯ ಕಾರಣಕ್ಕೆ ಅವಮಾನಿತರಾಗಿದ್ದರು. ಯಾರೂ ಜನ್ಮತಃ ದಡ್ಡರಾಗಿರಲು ಸಾಧ್ಯವಿಲ್ಲ. ಕಾಳಿದಾಸರು ಶಾಕುಂತಲಾ ಬರೆದದ್ದು, ವ್ಯಾಸರು ಮಹಾಭಾರತ ಬರೆದದ್ದು, ವಾಲ್ಮೀಕಿ ರಾಮಾಯಣ ಬರೆದದ್ದೇ ಹುಟ್ಟಿನಿಂದ ಯಾರೂ ದಡ್ಡರಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದೆ ಎಂದರು.

ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಕಾರಣದಿಂದ ನನಗೆ ಮುಖ್ಯಮಂತ್ರಿ ಅಗುವ ಅವಕಾಶ ಸಿಕ್ಕಿತು ಎಂದರು.

ಒಬ್ಬರಿಗೆ ಒಂದೇ ಮತ. ಎಲ್ಲಾ ಜಾತಿ, ಧರ್ಮ, ಅಂತಸ್ತಿವರಿಗೂ ಒಂದೇ ಮತ. ಈ ಸಮಾನತೆ ಆರ್ಥಿಕವಾಗಿ, ಸಾಮಾಜಿಕವಾಗಿಯೂ ಜಾರಿ ಆಗಬೇಕು. ಆಗ ಮಾತ್ರ ಸಮಾನತೆ ದಿಕ್ಕಿನಲ್ಲಿ ನಾವು ಮುನ್ನಡೆಯಲು ಸಾಧ್ಯ ಎಂದರು.

ಯಾವ ಧರ್ಮದಲ್ಲೂ ಮನುಷ್ಯ ತಾರತಮ್ಯ ಇಲ್ಕ. ಧರ್ಮವನ್ನು ರಾಜಕೀಯವಾಗಿ ಬಳಸಿಕೊಳ್ಳುವವರು ತಮ್ಮ ಲಾಭಕ್ಕಾಗಿ ತಾರತಮ್ಯ, ದ್ವೇಷ ಸೃಷ್ಟಿಸುತ್ತಾರೆ ಎಂದರು.

ಶೋಷಿತ ಸಮುದಾಯಗಳು ಜಾತಿ ಸಮ್ಮೇಳನ ಮಾಡುವುದು ತಪ್ಪಲ್ಲ. ಆದರೆ ಮುಂದುವರೆದ ಜಾತಿಗಳು ಜಾತಿ ಹೆಸರಲ್ಲಿ ಸಮ್ಮೇಳನ ನಡೆಸುವುದು ಸಾಮಾಜಕವಾಗಿ ತಪ್ಪಾಗುತ್ತದೆ. ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ ಎಂದರು.

ಮನುಷ್ಯ ಧರ್ಮ ಸ್ಥಾಪನೆ ಆಗುವವರೆಗೂ ನಾವೆಲ್ಲರೂ ಶ್ರಮಿಸುತ್ತಲೇ ಇರಬೇಕು.

ನಾನು ಎಲ್ಲಾ ಜಾತಿಯವರನ್ನೂ ಪ್ರೀತಿಸುತ್ತೇನೆ. ಆದರೆ ಜಾತಿ ಮಾಡುವವರನ್ನು ನಾನು ವಿರೋಧಿಸುತ್ತೇನೆಯೇ ಹೊರತು ಅವರನ್ನೂ ದ್ವೇಷಿಸುವುದಿಲ್ಲ. ಜಾತಿ ಕಾರಣದಿಂದ ಕನಕದಾಸರನ್ನು ಉಡುಪಿ ಮಠದ ಒಳಗೆ ಬಿಡಲಿಲ್ಲ ಎನ್ನುತ್ತಾ ಕನಕನ‌ ಕಿಂಡಿ ಸೃಷ್ಟಿಯಾದ ಪ್ರಸಂಗವನ್ನು ವಿವರಿಸಿದರು.

ಕನಕದಾಸರ 500 ನೇ ಜಯಂತಿಯನ್ನು ನಾನು ಸಾರಿಗೆ ಸಚಿವನಾಗಿದ್ದಾಗ ಆಗಿನ ಎಸ್.ಆರ್.ಬೊಮ್ಮಾಯಿ ಸರ್ಕಾರದಲ್ಲಿ ಆರಂಭಿಸಿದೆವು. ಬಳಿಕ ಇಡೀ ರಾಜ್ಯ ಪ್ರವಾಸ ಮಾಡಿ ಕಾಗಿನೆಲೆ ಗುರುಪೀಠವನ್ನು , ಮಠವನ್ನು ರೂಪಿಸಿದ್ದು ಕೂಡ ನಾನೇ. ಆದ್ದರಿಂದ ಇಡೀ ಸಮುದಾಯ ಒಟ್ಟಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ:ಸಿ.ಎಂ.ಘೋಷಣೆ

ನಾನು ಜಾತಿ ಜನಗಣತಿ ಪರವಾಗಿ ಇದ್ದೇವೆ. ಕಾಂತರಾಜ ಅವರ ವರದಿಯನ್ನು ಮುಂದಿನ ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚಿಸುವ ಉದ್ದೇಶ ಕೂಡ ಇದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ನಾನು ಬಸವಣ್ಣ-ಅಂಬೇಡ್ಕರ್-ಕನಕದಾಸರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ

ನಾನು ನನ್ನ ದಾರಿ ಸ್ಪಷ್ಟಪಡಿಸಿಕೊಂಡಿದ್ದೀನಿ. ಬಸವಣ್ಣ-ಅಂಬೇಡ್ಕರ್-ಕನಕದಾಸರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಬೆಂಗಳೂರು, ಶಿವಮೊಗ್ಗ ಬಳಿಕ ಮಂಡ್ಯದಲ್ಲೂ ಐಶ್ವರ್ಯ ಗೌಡ ವಂಚನೆ: ಪೊಲೀಸರಿಗೆ ದೂರು

BREAKING : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಯುವನಿಧಿ’ ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM1 Min Read

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM1 Min Read

ಮೂರು ವಾರ ಈ ದಿನದಂದು 2 ಲವಂಗ ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ, ನಿಮ್ಮ ಬಡತನ ನಿವಾರಣೆ

29/03/2026 6:38 PM2 Mins Read
Recent News

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM

‘ಸಿಲಿಂಡರ್ ಖಾಲಿ’ಯಾಗುವ ಆತಂಕವೇ? ಈ 5 ಸರಳ ಸೂತ್ರ ಪಾಲಿಸಿದರೆ ‘ಗ್ಯಾಸ್ ಉಳಿತಾಯ’ ಗ್ಯಾರಂಟಿ!

29/03/2026 6:55 PM

ಮೂರು ವಾರ ಈ ದಿನದಂದು 2 ಲವಂಗ ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ, ನಿಮ್ಮ ಬಡತನ ನಿವಾರಣೆ

29/03/2026 6:38 PM
State News
KARNATAKA

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

By kannadanewsnow0929/03/2026 8:05 PM KARNATAKA 1 Min Read

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು…

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM

ಮೂರು ವಾರ ಈ ದಿನದಂದು 2 ಲವಂಗ ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ, ನಿಮ್ಮ ಬಡತನ ನಿವಾರಣೆ

29/03/2026 6:38 PM

BREAKING: ನಾಳೆ ನಡೆಯಬೇಕಿದ್ದ ‘ಕರ್ನಾಟಕ SSLC ಹಿಂದಿ ಪರೀಕ್ಷೆ’ ಮಾರ್ಚ್.31ಕ್ಕೆ ಮುಂದೂಡಿಕೆ

29/03/2026 6:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.