ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಸಂಬಂಧ ಅವರ ನಿವಾಸದಲ್ಲಿ ಇಂದು ಎಸ್ಐಟಿಯಿಂದ ಸ್ಥಳ ಮಹಜರು ನಡೆಸಲಾಗಿದೆ.
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಇಂದು ಎಸ್ಐಟಿಯಿಂದ ಬಾಡಿ ವಾರಂಟ್ ಪಡೆದು, ಪ್ರಜ್ವಲ್ ರೇವಣ್ಣ ಅವರೊಂದಿಗೆ ಹಾಸನದ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು.
ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣದಲ್ಲಿ, ಇಂದು ಪ್ರಜ್ವಲ್ ರೇವಣ್ಣ ಸಮ್ಮುಖದಲ್ಲಿ ಹಾಸನದ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರು ಮಾಡಿದರು.
ಅಂದಹಾಗೇ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜೂನ್.24ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಹೀಗಾಗಿ ಅವರು ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.
ಗಮನಿಸಿ : ʻರೇಷನ್ ಕಾರ್ಡ್ʼ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ!
BREAKING : ʻBMTCʼ ನೌಕರರ ಮುಷ್ಕರಕ್ಕೆ ಬ್ರೇಕ್ : 6 ತಿಂಗಳು ಪ್ರತಿಭಟನೆ ನಡೆಸದಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ