ಬೆಂಗಳೂರು : ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು ಅವರನ್ನು, ಎಸ್ಐಟಿ ಅಧಿಕಾರಿಗಳು ತಡರಾತ್ರಿ ಅವರಿಗೂ ವಿಚಾರಣೆ ನಡೆಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಿದ್ಧತೆ ಮಾಡಿಕೊಂಡು ಇಂದು ಮ್ಯಾಜಿಸ್ಟ್ರೇಟ್ ಎದುರು ಸೈಟ್ ಅಧಿಕಾರಿಗಳು ಎಸ್ ಡಿ ರೇವಣ್ಣ ಅವರನ್ನು ಹಾಜರುಪಡಿಸಲಿದೆ ಎಂದು ತಿಳಿದು ಬಂದಿದೆ.
ಹೌದು ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಶಾಸಕ ಎಚ್ ಡಿ ರೇವಣ್ಣನನ್ನು SIT ಬಂಧಿಸಿದ್ದು,ತಡವರಾತ್ರಿಯವರೆಗೂ SIT ಅಧಿಕಾರಿಗಳು ರೇವಣ್ಣ ಅವರನ್ನು ವಿಚಾರಣೆ ನಡೆಸಿದ್ದಾರೆ. ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಚ್. ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕಾರ್ಲಟನ್ ಭವನದಲ್ಲಿರುವ SIT ಕಚೇರಿಯಲ್ಲಿ ರೇವಣ್ಣ ಅವರ ವಿಚಾರಣೆ ನಡೆದಿದೆ. ಇದೀಗ SITಮ್ಯಾಜಿಸ್ಟ್ರೆಟ್ ಎದುರು ಇಂದು ಹಾಜರುಪಡಿಸಲು ಎಲ್ಲ ದಾಖಲೆಗಳನ್ನು ಸಿದ್ಧತೆ ಮಾಡಿಕೊಂಡಿದೆ. ಸಂಜೆಯೊಳಗೆ ನ್ಯಾಯಾಧೀಶರ ಮುಂದೆ HD ರೇವಣ್ಣ ಅವರನ್ನು ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.