ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಹಾಗೂ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ಅವರು ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ಅವರ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾಸನದ ರವೀಂದ್ರನಗರದಲ್ಲಿರುವಂತ ವಕೀಲ ದೇವರಾಜೇಗೌಡ ಅವರ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನದ ರವೀಂದ್ರನಗರದಲ್ಲಿರುವಂತ ವಕೀಲ ದೇವರಾಜೇಗೌಡ ಅವರ ನಿವಾಸದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಅಂದಹಾಗೇ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಮೊದಲು ಟ್ವಿಸ್ಟ್ ಸಿಕ್ಕಿದೇ ವಕೀಲ ದೇವರಾಜೇಗೌಡ ಅವರಿಂದ ಆಗಿದೆ. ನನ್ನ ಬಳಿ ಇದ್ದಂತ ಪೆನ್ ಡ್ರೈವ್ ಅನ್ನು ವಕೀಲ ದೇವರಾಜೇಗೌಡ ಅವರಿಗೆ ನೀಡಲಾಗಿತ್ತು ಎಂಬುದಾಗಿ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಹೇಳಿದ್ದರು.
ಈ ಪ್ರಕರಣದ ನಂತ್ರ ವಕೀಲ ದೇವರಾಜೇಗೌಡ ಅವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡಿದಂತ ಆರೋಪದಲ್ಲಿ ದೂರು ನೀಡಿದ್ದರು. ಈ ದೂರು ಸಂಬಂಧ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಈಗ ನ್ಯಾಯಾಂಗ ಬಂಧನದಲ್ಲಿ ಅವರಿದ್ದಾರೆ.
ವಿಜಯಪುರ : ಮೂರು ಮಕ್ಕಳ ಸಾವಿನ ಪ್ರಕರಣ : ಪಾಲಿಕೆ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ‘FIR’ ದಾಖಲು
ರಾಜ್ಯದಲ್ಲೊಂದು ‘ಅಮಾನವೀಯ’ ಘಟನೆ: ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ‘ಪಾಪಿ ತಂದೆ’