ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಅದರಲ್ಲೂ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.
ಇದೀಗ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಿಕ್ಕಮಗಳೂರಿನ ಮೂಡಿಗೆರೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ಬೆಳೆಯುವುದು ಬಹಳ ಕಷ್ಟ. ಪ್ರತಿ ಹಂತದಲ್ಲೂ ಮಹಿಳೆಯರು ಅಗ್ನಿಪರೀಕ್ಷೆ ಎದುರಿಸಬೇಕು ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ಮಾತನಾಡಿ, ಆ ಸೀತಾ ಮಾತೆ ಕೂಡ ಅಗ್ನಿಪರೀಕ್ಷೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಯಾವ ಲೆಕ್ಕ ಬಿಡಿ ಎಂದು ಭಾವುಕರಾದರು.ಮಹಿಳೆ ಅಂದರೆ ಸಂಘರ್ಷ , ಅದು ಜತೆಯೇ ಬರುತ್ತೆ. ಹುಟ್ಟಿನಿಂದ ಸಾವುಯವವರೆಗೂ ಪರೀಕ್ಷೆಗಳು ಇರ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕರಾಗಿದ್ದಾರೆ.
BIGG NEWS: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 20 ಸ್ಥಾನ ಕೂಡ ಗೆಲ್ಲಲ್ಲ: ನಳಿನ್ ಕುಮಾರ್ ಕಟೀಲ್
ಜಮೀರ್ ಅಹಮದ್ ಅವರೇ, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ.? – HDK ಪ್ರಶ್ನೆ