ಬೆಂಗಳೂರು: ಬಸವೇಶ್ವರರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು ವಿಧಾನಸೌಧದ ಎದುರು ಪ್ರತಿಷ್ಠಾಪಿಸುವ ಸಂಬಂಧ ಸ್ಥಳ ಪರಿಶೀಲನೆ ನಡೆದಿದೆ.
BIG NEWS: ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ – ಸಿಎಂ ಬೊಮ್ಮಾಯಿ ಘೋಷಣೆ
ಸಿಎಂ ಬಸವರಾಜ ಬೊಮ್ಮಾಯಿ ಅವರ ಸೂಚನೆಯಂತೆ ಕಂದಾಯ ಸಚಿವ ಆರ್. ಅಶೋಕ್ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ಶನಿವಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀಲನಕ್ಷೆ ಪರಿಶೀಲಿಸಿ, ಸ್ಥಳಕ್ಕೆ ಜಂಟಿಯಾಗಿ ಭೇಟಿ ನೀಡಿ ತಪಾಸಣೆ ನಡೆಸಿದರು.
BIG NEWS: ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ – ಸಿಎಂ ಬೊಮ್ಮಾಯಿ ಘೋಷಣೆ
ಬಸವಣ್ಣನವರ ಮತ್ತು ಕೆಂಪೇಗೌಡರ ಪ್ರತಿಮೆಗಳ ಮಾದರಿಯನ್ನು ಸಿದ್ಧಪಡಿಸಿ ವಿಧಾನಸೌಧದ ಮುಂಭಾಗದಲ್ಲಿ ಸೂಕ್ತ ಸ್ಥಳ ನಿಗದಿಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿತ್ತು. ಅದರಂತೆ ಅವರು ಇಂದು ಸಿದ್ಧಪಡಿಸಿಕೊಂಡು ತಂದಿರುವ ನೀಲನಕ್ಷೆ ಮತ್ತು ಪ್ರತಿಮೆಗಳ ಮಾದರಿಗಳನ್ನು ಉಭಯ ಸಚಿವರೂ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.