ಗುರುಗ್ರಾಮ್(ಹರಿಯಾಣ): ಹರಿಯಾಣದ ಗುರುಗ್ರಾಮ್ನಲ್ಲಿ ಭಾನುವಾರ ಘೋರ ದುರಂತವೊಂದು ನಡೆದಿದೆ. ಮಳೆ ನೀರು ತುಂಬಿದ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಆರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಂಕರ್ ವಿಹಾರ್ ಕಾಲೋನಿಯ ನಿವಾಸಿಗಳಾದ ದುರ್ಗೇಶ್, ಅಜಿತ್, ರಾಹುಲ್, ಪಿಯೂಷ್, ದೇವ ಮತ್ತು ವರುಣ್ ಎಂಬ 8 ರಿಂದ 13 ವರ್ಷದೊಳಗಿನ ಮಕ್ಕಳು ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್, ರಾಜ್ಯ ವಿಪತ್ತು ನಿರ್ವಹಣಾ ಪಡೆ, ನಾಗರಿಕ ರಕ್ಷಣೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳ ತಂಡಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ.
ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಗುರುಗ್ರಾಮ್ ಜಿಲ್ಲಾಧಿಕಾರಿ ನಿಶಾಂತ್ ಕುಮಾರ್ ಯಾದವ್ ತಿಳಿಸಿದ್ದಾರೆ.
BIGG NEWS : ನಾಳೆಯಿಂದ ಬಿಜೆಪಿ `ಸಂಕಲ್ಪ ಯಾತ್ರೆ’: ಸಿಎಂ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಚಾಲನೆ