Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ‘ಕೇಂದ್ರ ಸರ್ಕಾರಿ ನೌಕರ’ರಿಗೆ ಸಿಹಿ ಸುದ್ದಿ: ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ, ಅಧಿಕೃತ ಆದೇಶ | DA Hike

22/04/2026 10:35 PM

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM

BIG NEWS: ಜೈವಿಕ ತಂದೆಯಲ್ಲದಿದ್ದರೇ ಮಗುವಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

22/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೈದ್ಯಕೀಯ ಪದವಿ ಇಲ್ಲದೇ ವೃತ್ತಿ ಮಾಡುತ್ತಿದ್ದ 6 ಜನರಿಗೆ 1 ಲಕ್ಷ ರೂ.ದಂಡ, ಒಬ್ಬರ ವಿರುದ್ದ FIR ದಾಖಲು
KARNATAKA

ವೈದ್ಯಕೀಯ ಪದವಿ ಇಲ್ಲದೇ ವೃತ್ತಿ ಮಾಡುತ್ತಿದ್ದ 6 ಜನರಿಗೆ 1 ಲಕ್ಷ ರೂ.ದಂಡ, ಒಬ್ಬರ ವಿರುದ್ದ FIR ದಾಖಲು

By kannadanewsnow0907/01/2025 7:03 PM

ಬಳ್ಳಾರಿ : ಜಿಲ್ಲೆಯಲ್ಲಿ ವೈದ್ಯಕೀಯ ಪದವಿ ವೃತ್ತಿ ಪಡೆಯದೇ ವೈದ್ಯಕೀಯ ಸೇವೆ ನೀಡುವ ನಕಲಿ ವೈದ್ಯರ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರಡಿ ದಂಡ ವಿಧಿಸುವ, ಅಗತ್ಯವೆನಿಸಿದಲ್ಲಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ಕಾನೂನಾತ್ಮಕ ಕ್ರಮ ಜರುಗಿಸಬೇಕು ಎಂದು ಕೆಪಿಎಮ್‌ಇ ಕಾಯ್ದೆಯ ಅಧ್ಯಕ್ಷರು ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚಿಸಿದರು.

ಮಂಗಳವಾರದAದು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ ಕೆಪಿಎಮ್‌ಇ ಕಾಯ್ದೆ ನೋಂದಣಿ ಮತ್ತು ಕುಂದು ಕೊರತೆಗಳ ಪರಿಹಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯಾರಾದರು ಅಧೀಕೃತ ವೈದ್ಯಕೀಯ ಪದವಿ ಪಡೆಯದೇ ವೈದ್ಯ ವೃತ್ತಿ ಮಾಡುವವರ ಮನೆ, ಮಳಿಗೆ, ಇತರೆ ಯಾವುದೇ ರೀತಿಯ ಕಟ್ಟಡಗಳಿಗೆ ಆರೋಗ್ಯಾಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಬೇಕು. ಅಂತಹವರಿಗೆ ಬಾಡಿಗೆ ಕಟ್ಟಡ ನೀಡಿದ್ದಲ್ಲಿ ಕಟ್ಟಡ ಮಾಲೀಕರ ವಿರುದ್ಧ ಕೆಪಿಎಮ್‌ಇ ಕಾಯ್ದೆಯಡಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಅಧಿಕೃತ ವೈದ್ಯಕೀಯ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸಲು ಸೂಚಿಸಬೇಕು. ಇದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಅನಧೀಕೃತವಾಗಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬAದಲ್ಲಿ ಅವರ ವೈದ್ಯಕೀಯ ಪದವಿಯ ಮಾಹಿತಿ ಹೊಂದಿ ಚಿಕಿತ್ಸೆ ಪಡೆಯಬೇಕು. ನಕಲಿ ವೈದ್ಯರು ಎಂದು ಕಂಡುಬAದರೆ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ವೈದ್ಯವೃತ್ತಿ ಮಾಡುತ್ತಿದ್ದ ನಕಲಿ ವೈದ್ಯ ಬಸವರಾಜ್ ವಿರುದ್ಧ ಮೋಕ ಪೋಲೀಸ್ ಠಾಣೆಯಲ್ಲಿ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಿಸಲು ಸೂಚಿಸಿದ ಅವರು, ಕಪ್ಪಗಲ್ಲು ಗ್ರಾಮದ ರಾಜಣ್ಣ, ರೆಹಮಾನ್, ಶೇಕ್ಷಾವಲಿ, ಗುರು ಪ್ರಕಾಶ್, ಮಹಾದೇವ್ ಮತ್ತು ಸಿರುಗುಪ್ಪ ತಾಲ್ಲೂಕಿನ ಕೆ.ಸೂಗೂರು ಗ್ರಾಮದ ಬೆಂಚಿ ಕ್ಯಾಂಪ್‌ನ ಕೆ.ಚಂದ್ರಶೇಖರ್ ಸೇರಿದಂತೆ ಒಟ್ಟು 6 ಜನರ ವಿರುದ್ದ ತಲಾ 1 ಲಕ್ಷ ದಂಡ ವಿಧಿಸಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು, ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಡಾ.ಪೂರ್ಣಿಮಾ ಎಸ್ ಕಟ್ಟಿಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ್, ಐಎಮ್‌ಎ ಅಧ್ಯಕ್ಷ ಡಾ.ಮಾಣಿಕ್‌ರಾವ್ ಕುಲಕರ್ಣಿ, ಫಾಕ್ಸಿ ಅಧ್ಯಕ್ಷ ಡಾ.ಶಿವಕುಮಾರ್, ಎಫ್‌ಪಿಎಐ ನ ವ್ಯವಸ್ಥಾಪಕರಾದ ವಿಜಯಲಕ್ಷಿö್ಮ, ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

BREAKING: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ‘ಉಚಿತ ಬಸ್ ಪಾಸ್’ ವಿತರಣೆಗೆ ಆಯ್ಕೆ ಸಮಿತಿ ರಚನೆ

ಸಿಲಿಕಾನ್ ಸಿಟಿ ಜನರೇ ಎಚ್ಚರ.! ಇನ್ಮುಂದೆ ಬೆಂಗಳೂರು ವಿವಿ ಆವರಣದಲ್ಲಿ ಕಸ ಹಾಕಿದ್ರೆ ಬೀಳುತ್ತೆ ದಂಡ

Share. Facebook Twitter LinkedIn WhatsApp Email

Related Posts

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM2 Mins Read

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM2 Mins Read

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM1 Min Read
Recent News

BIG BREAKING: ‘ಕೇಂದ್ರ ಸರ್ಕಾರಿ ನೌಕರ’ರಿಗೆ ಸಿಹಿ ಸುದ್ದಿ: ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ, ಅಧಿಕೃತ ಆದೇಶ | DA Hike

22/04/2026 10:35 PM

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM

BIG NEWS: ಜೈವಿಕ ತಂದೆಯಲ್ಲದಿದ್ದರೇ ಮಗುವಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

22/04/2026 10:03 PM

ಆನ್‌ಲೈನ್ ಗೇಮರ್‌ಗಳಿಗೆ ಶಾಕ್: ಮೇ 1 ರಿಂದ ದೇಶದಲ್ಲಿ ಹೊಸ ಗೇಮಿಂಗ್ ನಿಯಮಗಳು ಜಾರಿ!

22/04/2026 9:57 PM
State News
KARNATAKA

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

By kannadanewsnow0922/04/2026 10:22 PM KARNATAKA 2 Mins Read

ಶಿವಮೊಗ್ಗ: “ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಾಗೂ ಸಚಿವ ಸ್ಥಾನದ ಕುರಿತು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಡೆಸಿದ ಮಾತುಕತೆ ಅತ್ಯಂತ…

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.