ಮಂಡ್ಯ : ಲೋಕಸಭಾ ಚುನಾವಣೆ ಸಮಿತಿ ಸುತ್ತಿದಂತೆ ಇದೀಗ ಮಂಡ್ಯ ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಆಗದೆ ಇದ್ದರೂ ಕೂಡ ಜೆಡಿಎಸ್ ಫುಲ್ ಆಕ್ಟಿವ್ ಆಗಿದ್ದು, ಇಂದು ಮಂಡ್ಯ ಜಿಲ್ಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ 2019 ರಲ್ಲಿ ಹೊಂದಾಣಿಕೆ ಹೆಸರಲ್ಲಿ ಕುತ್ತಿಗೆ ಕೊಯಿತು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಮಂಡ್ಯ ಸಂಸದೆ ಸುಮಲತಾ ನನ್ನ ‘ಸ್ವಂತ ಅಕ್ಕ’ : ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ಕ್ಷೇತ್ರಕ್ಕೆ ಬರಬೇಕು ಅಂದುಕೊಂಡವನಲ್ಲ. ಸಿನಿಮಾ ಹಂಚಿಕೆದಾರನಾಗಿದ್ದೆ ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದೆ. ನಾನು ಮಂಡ್ಯ ಜಿಲ್ಲೆಯ ಜನರ ಜೊತೆ ಮೊದಲಿನಿಂದಲೂ ಇದ್ದೇನೆ. 2019 ರ ಚುನಾವಣೆಯಲ್ಲಿ ಹೊಂದಾಣಿಕೆ ಎಂದು ಕುತ್ತಿಗೆ ಕೊಯ್ದರು ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.
BREAKING: ರಾಜ್ಯ ಸರ್ಕಾರದಿಂದ ಏ.1ರಿಂದ ಭಾನುವಾರವೂ ‘ಸಬ್ ರಿಜಿಸ್ಟ್ರಾರ್ ಕಚೇರಿ’ ತೆರೆಯಲು ಅಧಿಕೃತ ಆದೇಶ
ಅದಕ್ಕೆ ಉತ್ತರ ಕೊಡುವ ಶಕ್ತಿ ಮಂಡ್ಯ ಜನರ ಕೈಯಲ್ಲಿದೆ. ಜನ್ಮಭೂಮಿ ಹಾಸನ, ರಾಜಕೀಯ ಭವಿಷ್ಯ ನೀಡಿದ್ದು ರಾಮನಗರ, ಆದರೆ ನನ್ನ ಜೀವ ಮಿಡಿಯುವುದು ಮಂಡ್ಯಕ್ಕಾಗಿ ಸ್ವಾಭಿಮಾನ ಎನ್ನುವುದು ಮಾತಿನಲ್ಲಿ ಅಲ್ಲ ಕೆಲಸದಲ್ಲಿರಬೇಕು. ನಾಟಿ ಸ್ಟೈಲ್ ಅಂತಾರೆ ದುಡ್ಡಿನಿಂದ ರಾಜಕೀಯ ಮಾಡುವುದಲ್ಲ ಈ ಚುನಾವಣೆ ಕೆಲವರಿಗೆ ಕಲೆಕ್ಷನ್ ಮಾಡಿಕೊಳ್ಳಲು ಒಳ್ಳೆಯ ಅವಕಾಶವಿದೆ ಎಂದು ತಿಳಿಸಿದರು.
ಕಲಬುರ್ಗಿಯ ಅಂಗನವಾಡಿ ಕೇಂದ್ರದಲ್ಲಿ ‘ಕಳಪೆ’ ಆಹಾರ ಪೂರೈಕೆ : ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು
ಮಂಡ್ಯದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಾರ್ಚ್ 21ಕ್ಕೆ ನನಗೆ ಆಪರೇಷನ್ ಇದೆ. ನನಗೆ 84 ವರ್ಷ ಆಯಸ್ಸು ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಈ ಜೀವ ಇಷ್ಟು ಬೇಗ ಮಣ್ಣಿಗೆ ಹೋಗುವುದಿಲ್ಲ. ಜನರು ಸರ್ಟಿಫಿಕೇಟ್ ನೀಡಿದ ಮೇಲೆ ಈ ಜೀವ ಮಣ್ಣಿಗೆ ಹೋಗುತ್ತದೆ.ಜನರ ಋಣ ತೀರಿಸಿದ ಮೇಲೆ ನಾನು ಮಣ್ಣಿಗೆ ಹೋಗುವುದು. ಅಲ್ಲಿಯವರೆಗೆ ನಾನು ಮಣ್ಣಿಗೆ ಹೋಗುವುದಿಲ್ಲ. ಎಚ್ ಡಿ ದೇವೇಗೌಡರು ಜ್ಯೋತಿಷಿಗಳ ಮಾತು ಕೇಳಿ ಬದುಕಿದ್ದಾರೆ ಎಂದು ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.