ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಬ್ಮನ್ ಗಿಲ್ಗೆ 12 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ.
ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದ ಐಪಿಎಲ್ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಗಿಲ್ಗೆ 12 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ” ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.
ಮಂಗಳವಾರ ಇಲ್ಲಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 63 ರನ್ ಗಳಿಂದ ಸೋಲನುಭವಿಸಿದ ಗಿಲ್ ನೇತೃತ್ವದ ತಂಡ ಈ ಆವೃತ್ತಿಯಲ್ಲಿ ಮೊದಲ ಸೋಲನ್ನು ಅನುಭವಿಸಿತು.
ಮೊದಲ ಬಾರಿಗೆ ಐಪಿಎಲ್ ಫ್ರಾಂಚೈಸಿಯನ್ನು ಮುನ್ನಡೆಸುತ್ತಿರುವ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತನ್ನ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರು ರನ್ಗಳಿಂದ ಗೆದ್ದಿತು