ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದು, ಎಸ್ ಎಂ ಕೃಷ್ಣರವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೆರಡು ಮೂರು ದಿನಗಳಲ್ಲಿ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗುತ್ತದೆ. ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಡಾ,ಕೆ ಸುಧಾಕರ್ ಹೇಳಿದ್ದಾರೆ.
ಚಿಕಿತ್ಸೆಗೆ ವೈದ್ಯರ ತಂಡವನ್ನು ರಚಿಸಿ ಅವರ ಬಗ್ಗೆ ನಿಗಾ ವಹಿಸಲಾಗಿದೆ. ಇಂದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆರೋಗ್ಯ ಚೇತರಿಸಿಕೊಳ್ಳಲು ಜನರು ಪ್ರಾರ್ಥನೆ ಮಾಡಬೇಕೆಂದು ಸುಧಾಕರ್ ಮನವಿ ಮಾಡಿದರು. ನಿರಂತರ ಚಿಕಿತ್ಸೆಯಿಂದ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ.
Shocking News: ‘ಮಾಟಗಾರ್ತಿಯರು’ ಎಂದು ಬಲವಂತವಾಗಿ ಮಲ ತಿನ್ನಿಸಿದ ಗ್ರಾಮಸ್ಥರು…! ಎಲ್ಲಿ ಗೊತ್ತಾ
BIGG NEWS : `ಮೈಸೂರು ದಸರಾ’ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ವಿಶೇಷ ಉಡುಗೊರೆ!