ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ. ಎಸ್ ಎಂ ಕೃಷ್ಣ ಆರೊಗ್ಯದ ಕುರಿತು ಅವರ ಕಚೇರಿಯ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ. ವೈದ್ಯರು ಹೇಳಿರುವ ಪ್ರಕಾರ ಎಸ್ ಎಂ ಕೃಷ್ಣರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕೋವಿಡ್ ಹಾಗೂ ಜ್ವರಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳನ್ನು ಮಾಡಿದ್ದೇವೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಯಾವುದೇ ಊಹಾಪೋಹದ ಮಾಹಿತಿಗಳನ್ನು ಪ್ರಸಾರ ಮಾಡಬಾದೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ಶನಿವಾರ ಸಂಜೆ ಎಸ್ ಎಂ ಕೃಷ್ಣ ಅವರಿಗೆ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನಲೆಯಲ್ಲಿ ಅವರನ್ನು ಕೂಡಲೇ ಹತ್ತಿರ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.\
ಬೆಂಗಳೂರು: ಮೃತಪಟ್ಟ ಸ್ಥಿತಿಯಲ್ಲಿ ಏರ್ ಫೋರ್ಸ್ ಕೆಡೆಟ್ ಟ್ರೈನಿ ಪತ್ತೆ, 6 ಮಂದಿ ಅಧಿಕಾರಿಗಳ ವಿರುದ್ಧ ಕೊಲೆ ಆರೋಪ