ಮಂಡ್ಯ : ಅಂಗನವಾಡಿ ಕೇಂದ್ರಗಳು ಮಕ್ಕಳ ಪೌಷ್ಟಿಕತೆ ಜೊತೆಗೆ ಶಾಲಾ ಪೂರ್ವ ಶಿಕ್ಷಣ ನೀಡುವ ಕೆಲಸವನ್ನು ಮಾಡುವ ಗುರುತರ ಜವಾಬ್ದಾರಿ ಹೊಂದಿವೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು.
ಮದ್ದೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇವರ ಸಹಯೋಗದೊಂದಿಗೆ ತಾಲೂಕಿನ ಸಕ್ಷಮ ಅಂಗನವಾಡಿ ಕೇಂದ್ರಗಳಿಗೆ ಸ್ಮಾಟ್ ಟಿವಿ ವಿತರಣೆ ಮಾಡಿ ಅವರು ಮಾತನಾಡಿದರು.
ಇತ್ತಿಚಿನ ದಿನಗಳಲ್ಲಿ ಮಕ್ಕಳು ಸಾಕಷ್ಟು ಚುರುಕುತನದಿಂದ ಬೆಳವಣಿಗೆ ಹೊಂದುತ್ತಿದ್ದಾರೆ. ಹೀಗಾಗಿ, ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ನೀಡುವುದರಲ್ಲಿ ತಂತ್ರಜ್ಞಾನ ಆಧಾರಿತ ಕಲಿಕಾಭಿವೃದ್ದಿಗೆ ಸಹಾಯವಾಗಲು ತಾಲೂಕಿನಲ್ಲಿ 408 ಕೇಂದ್ರಗಳಿದ್ದು, ಇಂದು 108 ಕೇಂದ್ರಗಳಿಗೆ ಸ್ಮಾರ್ಟ್ ಟಿವಿ ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಅಂಗನವಾಡಿಗಳಿಗೆ ಹಂತ ಹಂತವಾಗಿ ವಿತರಿಸಲಾಗುವುದು ಎಂದು ತಿಳಿಸಿದರು.
ಮಕ್ಕಳಲ್ಲಿ ಯಾವುದೇ ರೀತಿಯ ಅಪೌಷ್ಟಿಕತೆಯಿಂದ ಬಳಲುಬಾರದು ಎಂಬ ಉದ್ದೇಶದಿಂದ ಸರ್ಕಾರ ಈಗಾಗಲೇ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಠಿಕಾಂಶದ ಆಹಾರ ನೀಡಲಾಗುತ್ತಿದೆ. ಪೌಷ್ಠಿಕ ಆಹಾರ ಮತ್ತು ಆರೋಗ್ಯ ಸೇವೆ ಒದಗಿಸುವ ಗುರಿ ಹೊಂದಿದೆ. ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಉತ್ತಮ ಕಟ್ಟಡ, ಪಿಠೋಪಕರಣ, ಆಟಿಕೆ ಮತ್ತು ಬೋಧನಾ ಸಾಮಗ್ರಿಗಳನ್ನು ಮುಂದಿನ ದಿನಗಳಲ್ಲಿ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಕೆಲ ದಿನಗಳ ಹಿಂದೆಯಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜೊತೆ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸವಲತ್ತುಗಳನ್ನು ಕೊಡ್ತಿಲ್ಲ ಎಂದು ಪ್ರಶ್ನೆ ಮಾಡಿದ್ದೆ. ಸಚಿವರು ನಿಮ್ಮ ಬೇಡಿಕೆಗಳಿಗೆ ಆದಷ್ಟು ಬೇಗ ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಚಲುವರಾಜು, ಬಿಇಓ ಧನಂಜಯ, ಟಿಎಚ್ಓ ರವಿಶಂಕರ್ ಸಿಡಿಪಿಓ ಅರುಣ್ ಕುಮಾರ್, ತಾ.ಪಂ ಯೋಜನಾಧಿಕಾರಿ ಸುರೇಶ್ ಹಾಗೂ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಅಗ್ನಿವೀರ ನೇಮಕಾತಿ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಬಳ್ಳಾರಿಯಲ್ಲಿ Rally ಆಯೋಜನೆ
BREAKING: ಕೆಂಪು ಕೋಟೆ ಸ್ಫೋಟ: ಮತ್ತೊಬ್ಬ ಆತ್ಮಹತ್ಯಾ ಬಾಂಬರ್‌ನ ಸಹಾಯಕನನ್ನು ಬಂಧಿಸಿದ NIA | Red Fort Blast








