ನವದೆಹಲಿ: ಪ್ರಯಾಣಿಕರಿದ್ದ ಸ್ಪೈಸ್ ಜೆಟ್ ವಿಮಾನದ ಕ್ಯಾಬಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದೆ. ದೆಹಲಿಯಿಂದ ಜಬಲ್ಪುರಕ್ಕೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನವು ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಮರಳಿದೆ. ವಿಮಾನವು 5,000 ಅಡಿ ಎತ್ತರದಲ್ಲಿ ಹಾರಾಡುತ್ತಿದ್ದ ವೇಳೆ ಕ್ಯಾಬಿನ್ ಒಳಗೆ ಹೊಗೆ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದಾರೆ. ಸದ್ಯ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸ್ಪೈಸ್ಜೆಟ್ ವಕ್ತಾರರು ತಿಳಿಸಿದ್ದಾರೆ