ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಮತ್ತು ಅವರ ಪುತ್ರಿ ಗೋವಾ ರೆಸ್ಟೋರೆಂಟ್ ಮತ್ತು ಬಾರ್ನ ಮಾಲೀಕರಲ್ಲ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಅವರ ವಿರುದ್ಧದ ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದೆ.
ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ನೆಟ್ಟಾ ಡಿಸೋಜಾ ಮತ್ತು ಇತರರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಅವರ ಪುತ್ರಿಯ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
ಮೂವರು ಕಾಂಗ್ರೆಸ್ ನಾಯಕರ ವಿರುದ್ಧ ಸಚಿವೆ ಇರಾನಿ ಅವರು ಸಲ್ಲಿಸಿದ 2 ಕೋಟಿ ಸಿವಿಲ್ ಮಾನನಷ್ಟ ಮೊಕದ್ದಮೆ ವಿಚಾರಣೆಯ ಸಂದರ್ಭದಲ್ಲಿ, ʻದಾಖಲೆಗಳನ್ನು ಪರಿಗಣಿಸಿದಾಗ, ಸ್ಮೃತಿ ಮತ್ತು ಅವರ ಮಗಳ ಪರವಾಗಿ ಯಾವುದೇ ಪರವಾನಗಿ ನೀಡಲಾಗಿಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ. ಇವರು ರೆಸ್ಟೋರೆಂಟ್ನ ಮಾಲೀಕರಲ್ಲ. ಅವರು ಲೈಸೆನ್ಸ್ಗಾಗಿ ಎಂದಿಗೂ ಅರ್ಜಿ ಸಲ್ಲಿಸಿಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆʼ ಎಂದು ಕೋರ್ಟ್ ಹೇಳಿದೆ.
ಇನ್ನೂ, ಇರಾನಿ ಮತ್ತು ಅವರ ಮಗಳ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದ ಪೋಸ್ಟ್ ಅಳಿಸುವಂತೆ ಕಾಂಗ್ರೆಸ್ ನಾಯಕರಿಗೆ ಹೈಕೋರ್ಟ್ ಹೇಳಿದೆ.
ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ನೆಟ್ಟಾ ಡಿಸೋಜಾ ಮತ್ತು ಇತರರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಅವರ ಪುತ್ರಿಯ ಮೇಲೆ ಈ ಆರೋಪ ಮಾಡಿದ್ದು, ʻತನ್ನ ಘನತೆಗೆ ಧಕ್ಕೆ ತರುವ ದೃಷ್ಟಿಯಿಂದ ಕಾಂಗ್ರೆಸ್ ನನ್ನ ಮೇಲೆ ವಯಕ್ತಿಕ ದಾಳಿ ಮಾಡುತ್ತಿದೆ ಎಂದು ಈ ಕಾಂಗ್ರೆಸ್ ನಾಯಕರುಗಳಿಗೆ ಸ್ಮೃತಿ ನೊಟೀಸ್ ಕಳುಹಿಸಿದ್ರು. ಅಷ್ಟೇ ಅಲ್ಲದೇ, ನನ್ನ ಹಾಗೂ ಮಗಳ ಮೇಲೆ ಸುಳ್ಳು ಆರೋಪ ಮಾಡಿದಕ್ಕಾಗಿ ಅವರು ನಮ್ಮ ಬಳಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆʼ.
ಸ್ಮೃತಿ ಇರಾನಿ ಅವರ 18 ವರ್ಷದ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
Breaking news: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಂಚಿನ ಪದಕ ಗೆದ್ದ ವೇಟ್ಲಿಫ್ಟರ್ ʻಹರ್ಜಿಂದರ್ ಕೌರ್ʼ