ನವದೆಹಲಿ: ಗೋವಾದ ರೆಸ್ಟೋರೆಂಟ್ಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಅವರ ಮಗಳ ವಿರುದ್ಧದ ಆರೋಪದ ಮೇಲೆ ಅವರು ಮಾಡಿದ ಟ್ವೀಟ್ಗಳನ್ನು 24 ಗಂಟೆಗಳ ಒಳಗೆ ಅಳಿಸಲು ಮೂವರು ಕಾಂಗ್ರೆಸ್ ನಾಯಕರಿಗೆ ಇಂದು ಆದೇಶ ನೀಡಲಾಗಿದೆ. ಕೇಂದ್ರ ಸಚಿವರ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ನಾಯಕರಿಗೆ ಸಮನ್ಸ್ ನೀಡಿತ್ತು.
ಸ್ಮೃತಿ ಇರಾನಿ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ಜೈರಾಮ್ ರಮೇಶ್, ಪವನ್ ಖೇರಾ ಮತ್ತು ನೆಟ್ಟಾ ಡಿಸೋಜಾ ಅವರು ತಮ್ಮ ಟ್ವೀಟ್ಗಳನ್ನು ಅಳಿಸಿ ಆಗಸ್ಟ್ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
Illegal Bar row | Delhi High Court passes an interim injunction directing Congress leaders Jairam Ramesh, Pawan Khera and Netta D'souza to delete all related posts from all social media platforms
— ANI (@ANI) July 29, 2022
ಕಾಂಗ್ರೆಸ್ ನಾಯಕರು ಹಾಗೆ ಮಾಡಲು ವಿಫಲವಾದರೆ, ಈ ಪ್ರಕರಣದಲ್ಲಿ ಟ್ವೀಟ್ಗಳನ್ನು ಸಾಮಾಜಿಕ ಮಾಧ್ಯಮ ಕಂಪನಿ ಅಥವಾ ಟ್ವಿಟರ್ ತೆಗೆದುಹಾಕಬೇಕಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.
ಕೋರ್ಟ್ ಆದೇಶದ ನಂತರ ಟ್ವೀಟ್ ಮಾಡಿರುವ ಜೈರಾಮ್ ರಮೇಶ್ ,ಸ್ಮೃತಿ ಇರಾನಿ ಅವರು ದಾಖಲಿಸಿರುವ ಪ್ರಕರಣಕ್ಕೆ ಔಪಚಾರಿಕವಾಗಿ ಉತ್ತರಿಸುವಂತೆ ದೆಹಲಿ ಹೈಕೋರ್ಟ್ ನಮಗೆ ನೋಟಿಸ್ ನೀಡಿದೆ. ನ್ಯಾಯಾಲಯದ ಮುಂದೆ ಸತ್ಯವನ್ನು ಪ್ರಸ್ತುತಪಡಿಸಲು ನಾವು ಎದುರು ನೋಡುತ್ತೇವೆ ಎಂದು ಹೇಳಿದ್ದಾರೆ.
"The Delhi High Court has issued notice asking us to formally reply to the case filed by Smriti Irani. We look forward to presenting the facts before the court. We will challenge and disprove the spin being put out by Ms. Irani," tweets Congress leader Jairam Ramesh pic.twitter.com/KMt1AW82Yv
— ANI (@ANI) July 29, 2022
ಸಚಿವೆ ಇರಾನಿ ಅವರ 18 ವರ್ಷದ ಮಗಳು ಜೋಯಿಶ್ ಇರಾನಿ ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರ. ಈ ಬಗ್ಗೆ ಸಚಿವರನ್ನು ಗುರಿಯಾಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.