ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 44 ಸಾವಿರ ಕೋಟಿ ರೂ. ಖರ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು, ಬಡವರಿಗೆ ಅನುಕೂಲವಾಗಿದೆ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 44 ಸಾವಿರ ಕೋಟಿ ರೂ. ಖರ್ಚಾಗಿದೆ. ಅಕ್ಕಿ ದಾಸ್ತಾನು ಇದ್ದರೂ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಲಿಲ್ಲ. ಹೀಗಾಗಿ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಮೊದಲ ಹಂತದಲ್ಲಿ 8 ರಿಂದ 9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎರಡನೇ ಹಂತದಲ್ಲಿ ಹತ್ತಕ್ಕೂ ಹೆಚ್ಚು ಕ್ಷೆತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಒಟ್ಟಿನಲ್ಲಿ ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದರು.
ಮೇ 7ರಂದು ಎರಡನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿ ಹಲವು ನಾಯಕರು ಉಪಸ್ಥಿತಿ ಇರಲಿದೆ. ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದರು.