ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿ ಮಾಡಿಕೊಂಡಿರುವಂತ ಬಡವರಿಗೆ ನೋಟಿಸ್ ನೀಡ್ತೀರಿ. ಅದೇ ಸಚಿವ ಜಮೀರ್ ಅಹ್ಮದ್ ಖಾನ್, ಕಾಂಗ್ರೆಸ್ ಪಕ್ಷದ ಪ್ರಭಾವಿ ಶಾಸಕರು, ಪರಿಷತ್ ಸದಸ್ಯರು, ಸಂಸದರಿಗೆ ಯಾಕೆ ನೋಟಿಸ್ ನೀಡಿಲ್ಲ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಗುರುವಾರದಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕಾಂಗ್ರೆಸ್ ನಾಯಕರಾದಂತ ಮಲ್ಲಿಖಾರ್ಜುನ ಖರ್ಗೆ, ಧರ್ಮಸಿಂಗ್, ಸಿ.ಕೆ ಜಾಫರ್ ಶರೀಫ್, ಕನೀಝ್ ಫಾತಿಮಾ ಸೇರಿದಂತೆ ಇನ್ನಿತರರ ವಿರುದ್ಧವೂ ವಕ್ಫ್ ಆಸ್ತಿ ಒತ್ತುವರಿಯ ಆರೋಪಗಳಿದ್ದಾವೆ. ಅವರಿಗೆ ಯಾಕೆ ರಾಜ್ಯ ಸರ್ಕಾರ ನೋಟಿಸ್ ನೀಡಿಲ್ಲ ಎಂದು ಕೇಳಿದರು.
ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿರುವಂತ ವಿಂಡ್ಸರ್ ಮ್ಯಾನರ್ ಹೋಟೆಲ್ ವಕ್ಫ್ ಆಸ್ತಿಯಾಗಿದ್ದು, ಅದನ್ನು ರಾಜ್ಯ ಸರ್ಕಾರ ವಾಪಾಸು ಪಡೆದುಕೊಳ್ಳುವಲ್ಲಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಮಂಡಳಿಗೆ ಕೊಡಿಸುವಲ್ಲಿ ವಿಫಲವಾಗಿದೆ ಎಂಬುದಾಗಿ ಕಿಡಿಕಾರಿದರು.
ಯಲಹಂಕದ ವಡೆಪುರ ಗ್ರಾಮದ ವಿವಿಧ ಸರ್ವೆ ನಂಬರ್ ಗಳಲ್ಲಿ ವಕ್ಫ್ ಭೂಮಿಯನ್ನು ವಕ್ಫ್ ಬೋರ್ಡ್ ತನ್ನ ಸುಪರ್ದಿಗೆ ತಗೆದುಕೊಂಡಿಲ್ಲ. ಅದನ್ನು ಶಾಸಕ ಎನ್.ಎ.ಹ್ಯಾರಿಸ್ ತಮ್ಮ ಕುಟುಂಬದ ಸದಸ್ಯರ ಹೆಸರಿಗೆ ನೋಂದಣಿ ಮಾಡಿಸಿಕೊಂಡು, ಅಭಿವೃದ್ಧಿ ಪಡಿಸಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿದರು.
ರಾಜ್ಯದಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ 1973ರಲ್ಲಿನ ಸರ್ಕಾರಿ ಆದೇಶವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಹೋರಾಟ ಮಾಡುತ್ತಿದ್ದಾರೆ. ಆದರೇ ಇದೇ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಆ ಸರ್ಕಾರಿ ಆದೇಶವನ್ನು ಯಾಕೆ ಹಿಂಪಡೆಯಲಿಲ್ಲ ಎಂದು ಕೇಳಿದರು.
ವಕ್ಫ್ ಆಸ್ತಿಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧವೂ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
‘ಮುಡಾ ಕೇಸ’ಲ್ಲಿ ತನಿಖೆ ನಡೆಸದೇ ‘FIR’ ದಾಖಲಿಸಿ ‘ಲೋಕಾಯುಕ್ತ SP’ ವಿರುದ್ಧ ‘ಆಲಂ ಪಾಷಾ’ ಕಿಡಿ