ಬೆಂಗಳೂರು: ಹೆಣ್ಣು ಮಕ್ಕಳಿಗೆ ಗೌರವ, ಮಾನ್ಯತೆ ನೀಡಬೇಕಾದದ್ದು ನಮ್ಮ ಕರ್ತವ್ಯ. ಇಂದು ಹೆಣ್ಣು ಎಲ್ಲ ರಂಗದಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದಾಳೆ ಎನ್ನುವುದು ಅತ್ಯಂತ ಸಂತಸದ ವಿಷಯ. ಸಮಾಜದಲ್ಲಿ ಇನ್ನೂ ಬದಲಾವಣೆ ಆಗಬೇಕಾದ ಅಗತ್ಯ ಇದೆ ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಣ್ಣು ಬ್ರೂಣ ಹತ್ಯೆ ತಡಗಟ್ಟುವಲ್ಲಿ ನಮ್ಮ ಇಲಾಖೆ ಗಮನಾರ್ಹ ಕಾರ್ಯ ಮಾಡಿದೆ. ಕಟ್ಟುನಿಟ್ಟಿನ ಕಾನೂನು ರೂಪಿಸಿದೆ. ಪ್ರಸಕ್ತ 1000:947 ಪುರುಷ, ಸ್ತ್ರೀ ಅನುಪಾತ ಇದೆ. ಇದನ್ನು ಸರಿಪಡಿಸದಿದ್ದರೆ, ಸಾಮಾಜಿಕ ಸಮಸ್ಯೆ ಉಂಟಗುತ್ತದೆ. ಕೇವಲ ಕಾನೂನು ಕ್ರಮಗಳಿಂದ ಮಾತ್ರವಲ್ಲದೇ, ಸಾಮಾಜಿಕ ಜಾಗೃತಿಯೂ ಮುಖ್ಯ. ಎಷ್ಟೋ ಕಡೆ ಹೆಣ್ಣುಮಕ್ಕಳೇ ಈ ಕೆಟ್ಟ ಕಾರ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಹೆಣ್ಣಿಗೆ ಸ್ವಾವಲಂಬನೆ, ಸ್ವಾತಂತ್ರ್ಯ ನೀಡಲು ನಾವು ಬೆಂಬಲಿಸುತ್ತಾ, ಅವರ ಭವಿಷ್ಯ ಉಜ್ವಲಗೊಳಿಸೋಣ ಎಂದರು.
ರಾಷ್ಟ್ರೀಯ ಬಾಲ ಸ್ವಾಸ್ಥ್ಯ (RBSK)ಕಾರ್ಯಕ್ರಮದಡಿಯಲ್ಲಿ 6 ವರ್ಷದೊಳಗಿನ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳು ಹಾಗೂ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿ 1 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಆರ್‌ಬಿಎಸ್‌ಕೆ ಮೊಬೈಲ್ ಹೆಲ್ತ್ ತಂಡಗಳ ಮುಖಾಂತರ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ನಡೆಸಲಾಗಿದ್ದು, 2025-26ನೇ ಸಾಲಿಗೆ ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ಒಟ್ಟು 52,02,647 ಹೆಣ್ಣು ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಿದ್ದೇವೆ ಎಂದರು.
ʼಶುಚಿʼ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ 6 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಹಾಗೂ ವಸತಿ ನಿಲಯಗಳಲ್ಲಿನ (ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, KREIS, ಪರಿಶಿಷ್ಟ ಪಂಗಡ ಇಲಾಖೆ) ಒಟ್ಟು 19,64,507 ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್‌ಗಳನ್ನು ಒದಗಿಸಿದ್ದೇವೆ. ʼಮುಟ್ಟಿನ ಕಪ್ʼ ಯೋಜನೆಯಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಟ್ಟು 9,44,466 ಹೆಣ್ಣುಮಕ್ಕಳಿಗೆ ಮುಟ್ಟಿನ ಕಪ್ ಅನ್ನು ಒದಗಿಸಲು ಇಲಾಖೆ ಸಜ್ಜಾಗಿದೆ ಎಂದು ಹೇಳಿದರು.
ಗರ್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದು ಕಲ್ಯಾಣ ಕರ್ನಾಟಕ ಮತ್ತು ಸುತ್ತಮುತ್ತಲ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದು ಲಕ್ಷಕ್ಕೂ ಅಧಿಕ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಾಗುತ್ತದೆ. ಈ ಯೋಜನೆಯನ್ನು ಸದ್ಯದಲ್ಲಿಯೇ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಗರ್ಭಕಂಠ ಕಾನ್ಸರ್ ನಿರ್ಮೂಲನೆ ಮಾಡುವುದು ನಮ್ಮ ಆದ್ಯತೆಯ ಕಾರ್ಯಕ್ರಮಗಳಲ್ಲೊಂದು ಎಂದರು.
ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








