Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ರೇಲ್ ಅಣುಶಕ್ತಿ ಕೇಂದ್ರದ ಬಳಿ ಇರಾನ್ ಕ್ಷಿಪಣಿ ದಾಳಿ: 100ಕ್ಕೂ ಹೆಚ್ಚು ಜನರಿಗೆ ಗಾಯ, ಐರನ್ ಡೋಮ್ ವೈಫಲ್ಯ?

22/03/2026 9:13 AM

BREAKING : ಬಾಗಲಕೋಟೆಯಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ : ಬಿಜೆಪಿ ಸೇರೋದಾಗಿ ಡಾ.ದೇವರಾಜ್ ಪಾಟೀಲ್ ಹೇಳಿಕೆ!

22/03/2026 8:52 AM

Big News: ಹಣಕಾಸು ವಂಚನೆ ಆರೋಪ: CoinDCX ಸಂಸ್ಥಾಪಕರ ವಿರುದ್ಧ ಎಫ್‌ಐಆರ್!

22/03/2026 8:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳ ಪಾಲಿಗೆ ಸಾಮಾಜಿಕ ಮಾಧ್ಯಮಗಳು ಪಿಡುಗಾಗುತ್ತಿವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ
KARNATAKA

ಮಕ್ಕಳ ಪಾಲಿಗೆ ಸಾಮಾಜಿಕ ಮಾಧ್ಯಮಗಳು ಪಿಡುಗಾಗುತ್ತಿವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ

By kannadanewsnow0908/01/2026 3:07 PM

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್‌ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಚೈಲ್ಡ್ ಫಂಡ್ ಇಂಡಿಯಾ ಇವರ ಸಹಯೋಗದಲ್ಲಿ ಮಕ್ಕಳ ಆನ್ ಲೈನ್ ಸುರಕ್ಷತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಇಂದಿನ ಮಕ್ಕಳು ನಮ್ಮ ದೇಶದ ಭವಿಷ್ಯ, ಆದರೆ ಇಂದು ಮಕ್ಕಳ ಬೆಳವಣಿಗೆಗೆ ಮೊಬೈಲ್‌ ಅಡ್ಡಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ನಮ್ಮ ಕಾಲದಲ್ಲಿ ಮೊಬೈಲ್‌ ಗೀಳು ಇರಲಿಲ್ಲ, ನಾವು ಕೇಳಿ, ನೋಡಿ ಕಲಿಯುತ್ತಿದ್ದೇವು. ಆದರೆ, ಇಂದಿನ ಮಕ್ಕಳಿಗೆ ಎಲ್ಲವೂ ರೆಡಿಮೇಡ್‌ ಸಿಗುತ್ತಿವೆ. ಇಂದಿನ ಮಕ್ಕಳು ಹುಟ್ಟಿನಿಂದಲೇ ಮೊಬೈಲ್‌ ನೋಡುತ್ತಾ ಬೆಳೆಯುತ್ತಾರೆ. ಅವರಿಗೆ ಎಲ್ಲವೂ ಕುಂತಲ್ಲೇ, ನಿಂತಲ್ಲೇ ಸಿಗುತ್ತವೆ. ಇದು ಮಕ್ಕಳ ಬೆಳವಣಿಗೆಗೆ ಮಾರಕವಾಗಿದೆ ಎಂದರು.

ಇಂದು ಲಾಪ್‌ಟಾಪ್‌, ಮೊಬೈಲ್‌ ಬಳಸುವವರ ಸಂಖ್ಯೆ, ನಗರ ಪ್ರದೇಶದವರಿಗಿಂತ ಗ್ರಾಮಾಂತರ ಪ್ರದೇಶದವರೆ ಅಧಿಕವಾಗಿದ್ದಾರೆ. ಶೇಕಡ 78 ರಷ್ಟು ಮಂದಿ ಗ್ರಾಮೀಣ ಪ್ರದೇಶದವರು ಮೊಬೈಲ್‌, ಲಾಪ್‌ಟಾಪ್‌ ಉಪಯೋಗಿಸುತ್ತಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಉಪಯೋಗಿಸುತ್ತಿದ್ದಾರೆ ಎಂದರು.

ಸಾಮಾಜಿಕ ಜಾಲತಾಣಗಳ ಪಿಡುಗಿನಿಂದ ಶೋಷಣೆಗೊಳದಾದವರು ಪ್ರತಿದಿನ ನನ್ನ ಬಳಿ ದೂರು ತೆಗೆದುಕೊಂಡು ಬರುತ್ತಾರೆ, 14 ರಿಂದ 18 ವರ್ಷದ ಮಕ್ಕಳು ಅತಿಹೆಚ್ಚು ಆನ್‌ಲೈನ್‌ ಗೀಳಿಗೆ ಸಿಲುಕುತ್ತಿದ್ದಾರೆ, ಇದು ನಿಜಕ್ಕೂ ಕಳವಳಕಾರಿ. ಕಾನೂನು, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಇಲಾಖೆ ಒಳಗೊಂಡಂತೆ ಸಮಿತಿ ಮಾಡಿದರೂ ಸಾಮಾಜಿಕ ಜಾಲತಾಣದ ಪಿಡುಗನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಪೊಲೀಸರು, ಶಾಲಾ, ಕಾಲೇಜುಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಸಾಮಾಜಿಕ ಜಾಲತಾಣದ ಬಗ್ಗೆ ಅರಿವು ಮೂಡಿಸಬೇಕು. ಶಾಲೆಗಳಿಗೆ ಹೋಗಿ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕು, ಮಕ್ಕಳು ನಮ್ಮ ಸಮಾಜದ ಭವಿಷ್ಯ, ಮಕ್ಕಳನ್ನು ತಿದ್ದಿ ತೀಡುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು.

ಈ ವೇಳೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ‌ ಕೋಸುಂಬೆ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪದ್ಮಾವತಿ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜೈಲ್ಡ್ ಫಂಡ್ ಇಂಡಿಯಾದ ನಿರ್ದೇಶಕರಾದ ಶಬಂತಿ ಸೇನ್, ಡಾ.ತಿಪ್ಪೇಸ್ವಾಮಿ, ವೆಂಕಟೇಶ್, ಶೇಖರಗೌಡ ರಮ್ನಾಳ್, ಅಪರ್ಣಾ ಹೊಳ್ಳ ಹಾಗೂ ಪೊಲೀಸ್ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BREAKING : ಬಾಗಲಕೋಟೆಯಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ : ಬಿಜೆಪಿ ಸೇರೋದಾಗಿ ಡಾ.ದೇವರಾಜ್ ಪಾಟೀಲ್ ಹೇಳಿಕೆ!

22/03/2026 8:52 AM1 Min Read

BREAKING : ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ದೂರು : ಅತ್ಯಾಚಾರ ಆರೋಪ ಹಿನ್ನೆಲೆ ‘FIR’ ದಾಖಲು!

22/03/2026 8:29 AM1 Min Read

BIG NEWS : ನೀತಿ ಸಂಹಿತೆ ಉಲ್ಲಂಘನೆ : ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32 ಲಕ್ಷ ಹಣ ಜಪ್ತಿ

22/03/2026 8:21 AM1 Min Read
Recent News

ಇಸ್ರೇಲ್ ಅಣುಶಕ್ತಿ ಕೇಂದ್ರದ ಬಳಿ ಇರಾನ್ ಕ್ಷಿಪಣಿ ದಾಳಿ: 100ಕ್ಕೂ ಹೆಚ್ಚು ಜನರಿಗೆ ಗಾಯ, ಐರನ್ ಡೋಮ್ ವೈಫಲ್ಯ?

22/03/2026 9:13 AM

BREAKING : ಬಾಗಲಕೋಟೆಯಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ : ಬಿಜೆಪಿ ಸೇರೋದಾಗಿ ಡಾ.ದೇವರಾಜ್ ಪಾಟೀಲ್ ಹೇಳಿಕೆ!

22/03/2026 8:52 AM

Big News: ಹಣಕಾಸು ವಂಚನೆ ಆರೋಪ: CoinDCX ಸಂಸ್ಥಾಪಕರ ವಿರುದ್ಧ ಎಫ್‌ಐಆರ್!

22/03/2026 8:50 AM

ಮಾಜಿ ಎಫ್‌ಬಿಐ ಮುಖ್ಯಸ್ಥ ರಾಬರ್ಟ್ ಮುಲ್ಲರ್ ನಿಧನ: ‘ಅವರು ಸತ್ತಿದ್ದು ಒಳ್ಳೆಯದಾಯಿತು’ ಎಂದು ಟ್ರಂಪ್ ವಿವಾದಾತ್ಮಕ ಹೇಳಿಕೆ

22/03/2026 8:31 AM
State News
KARNATAKA

BREAKING : ಬಾಗಲಕೋಟೆಯಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ : ಬಿಜೆಪಿ ಸೇರೋದಾಗಿ ಡಾ.ದೇವರಾಜ್ ಪಾಟೀಲ್ ಹೇಳಿಕೆ!

By kannadanewsnow0522/03/2026 8:52 AM KARNATAKA 1 Min Read

ಬಾಗಲಕೋಟೆ : ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಚುನಾವಣೆಗು ಮುನ್ನ ಜೆಡಿಎಸ್…

BREAKING : ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ದೂರು : ಅತ್ಯಾಚಾರ ಆರೋಪ ಹಿನ್ನೆಲೆ ‘FIR’ ದಾಖಲು!

22/03/2026 8:29 AM

BIG NEWS : ನೀತಿ ಸಂಹಿತೆ ಉಲ್ಲಂಘನೆ : ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32 ಲಕ್ಷ ಹಣ ಜಪ್ತಿ

22/03/2026 8:21 AM

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

22/03/2026 7:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.