ಬೆಂಗಳೂರು : ಕಳೆದ ಸೆಪ್ಟೆಂಬರ್ 22 ರಿಂದ ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಇತ್ತೀಚಿಗೆ ಅಷ್ಟೆ ಬೆಂಗಳೂರಲ್ಲೂ ಕೂಡ ಸಮೀಕ್ಷೆ ಆರಂಭ ಆಗಿದೆ. ಇದುವರೆಗೂ ಬೆಂಗಳೂರು ನಗರದಲ್ಲಿ 11.95 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇಂದು ಒಂದು ದಿನ 1,35,2732 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಕಳೆದ 9 ದಿನಗಳಲ್ಲಿ ಒಟ್ಟು 11,95,717 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ.
ಕೇಂದ್ರ ನಗರ ಪಾಲಿಗೆ ವ್ಯಾಪ್ತಿಯಲ್ಲಿ ರೂ. 1,53,839 ಮಣಿಗಳ ಸಮೀಕ್ಷೆ ಪೂರ್ಣಗೊಂಡಿದೆ. ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ 1,75,480 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇನ್ನು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,92,239 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಅದೇ ರೀತಿಯಾಗಿ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,11, 38 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 3,62,851 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ..