ಜಾರ್ಖಂಡ್ : ಜಾರ್ಖಂಡಿನ ಚೈಬಾಸಾದಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ 26 ವರ್ಷದ ಸಾಫ್ಟ್ವೇರ್ ಇಂಜಿನಿಯರ್ಗೆ ಥಳಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು 10 ಅಪರಿಚಿತ ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದೈಹಿಕ, ಮಾನಸಿಕ ಮತ್ತು ಆಹಾರ ಪದ್ಧತಿಗಳ ಮೂಲಕ ಅಧಿಕ ರಕ್ತದೊತ್ತಡ ನಿಯಂತ್ರಿಸಬಹುದು – ಸಚಿವ ಡಾ.ಕೆ ಸುಧಾಕರ್
ಘಟನೆ ಸಂಬಂಧ ಸಂತ್ರಸ್ತೆ ದೂರು ದಾಖಲಿಸಿದ್ದು, ಅಕ್ಟೋಬರ್ 20 ರಂದು ಸಂಜೆ 6 ಗಂಟೆ ಸುಮಾರಿಗೆ ಯುವತಿ ತನ್ನ ಸ್ನೇಹಿತನೊಂದಿಗೆ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಯುವತಿ ರಸ್ತೆಬದಿಯಲ್ಲಿ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಾಗ, ಎಂಟರಿಂದ ಹತ್ತು ಜನರು ಬಂದು ಆಕೆಯ ಹಲ್ಲೆ ನಡೆಸಿ, ಆಕೆಯ ಸ್ನೇಹಿತೆಯನ್ನು ಬೆದರಿಸಿ ಸಮೀಪದ ನಿರ್ಜನ ಪೊದೆಗಳಿಗೆ ಕರೆದೊಯ್ದಿದ್ದಾರೆ ಬಳಿಕ ಯುವತಿಯನ್ನು ಏಕಾಂತ ಸ್ಥಳಕ್ಕೆ ಬಲವಂತವಾಗಿ ಕರೆದೊಯ್ದು ಗುಂಪು ಸರದಿಯಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ ಎಂದು ಪೊಲೀರು ತಿಳಿಸಿದ್ದಾರೆ.
ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿಕೊಂಡಿದ್ದು, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದ್ದಾರೆ. ಏತನ್ಮಧ್ಯೆ, ಯುವತಿ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎನ್ನಲಾಗುತ್ತಿದೆ.
ಸಂತ್ರಸ್ತ ಯುವತಿ ಜಿಕ್ಪಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ಕಂಪನಿಯೊಂದರಲ್ಲಿ ರಿಮೋಟ್ನಲ್ಲಿ ಕೆಲಸ ಮಾಡುತ್ತಿದ್ದರು.
ಘಟನೆ ಸಂಬಂಧ 10 ಅಪರಿಚಿತ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ಹೇಳಿದ್ದಾರೆ.
BIGG NEWS : ರಾಜ್ಯಾದ್ಯಂತ 10,889 ಮಸೀದಿಗಳಿಗೆ ಆಜಾನ್ ಬಳಸಲು ಅನುಮತಿ ನೀಡಿದ ಸರ್ಕಾರ