ಬಳ್ಳಾರಿ: ಸೋಲಾರ್ ಹಗರಣ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ವಿರುದ್ಧ ಸೋಲಾರ್ ಹಗರಣದ ಆರೋಪಿಸಿದ್ದಾರೆ.
BREAKING NEWS: ಓಲಾ, ಊಬರ್ಗೆ ಬಿಗ್ ರಿಲೀಫ್; ಸಾರಿಗೆ ಇಲಾಖೆ ಆದೇಶಕ್ಕೆ ಕೋರ್ಟ್ ಮಧ್ಯಂತರ ತಡೆ
ಈಗ ಬಿಜೆಪಿ ಸರ್ಕಾರ ಇದೆ, ಸಿಎಂ ಯಾಕೆ ಸುಮ್ಮನಿದ್ದಾರೆ? ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನನ್ನ ಅವಧಿಯಲ್ಲಿ ಸೋಲಾರ್ ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ. ಸಿಎಂ ಬಸವರಾಜ ಬೊಮ್ಮಾಯಿ ಬಹಿರಂಗ ಚರ್ಚೆಗೆ ಬರಲಿ ಎಂದು ಬಳ್ಳಾರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ 85% ಕಮೀಷನ್ ಸರ್ಕಾರ ಅಂತಾ ಸಿಎಂ ಆರೋಪ ಮಾಡುತ್ತಿದ್ದಾರೆ. ಸಿಎಂ ಈಗ ಯಾಕೆ ರೈಲು ಟಿಕೆಟ್ ತಗೊಂಡ್ರು. ಮೂರುವರೆ ವರ್ಷದಲ್ಲಿ ಅಧಿಕಾರದಲ್ಲಿ ಇದ್ದರು ಎಂದರು.