ಬೆಂಗಳೂರು:ಬಿಜೆಪಿಯ ಮಾಜಿ ಸಚಿವ ವಿ ಸೋಮಣ್ಣ ಅವರು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಪಕ್ಷದ ಮುಖಂಡ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಸೋಮಣ್ಣ ಈಗ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಮೂಲಗಳ ಪ್ರಕಾರ, ಸೋಮಣ್ಣ ಅವರು ಲೋಕಸಭೆ ಚುನಾವಣೆಗೆ ತಮ್ಮ ಸಂಭಾವ್ಯ ಉಮೇದುವಾರಿಕೆ ಕುರಿತು ದೇವೆಗೌಡ ಮತ್ತು ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದಾರೆ. ದೇವೆಗೌಡ ಮತ್ತು ಕುಮಾರಸ್ವಾಮಿಯವರ ಬೆಂಬಲವನ್ನೂ ಕೋರಿದರು.
ಬಿಜೆಪಿ ಜೊತೆಗಿನ ಮೈತ್ರಿಯ ಭಾಗವಾಗಿ ತುಮಕೂರಿನಲ್ಲಿ ಪ್ರಾದೇಶಿಕ ಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಯಸಿದೆ ಎಂಬ ವರದಿಗಳ ನಡುವೆ ಸೋಮಣ್ಣ ಜೆಡಿಎಸ್ ನಾಯಕತ್ವದೊಂದಿಗೆ ಸಭೆ ನಡೆಸಿದ್ದಾರೆ.
ಸದ್ಯ ತುಮಕೂರಿನ ಬಿಜೆಪಿ ಸಂಸದರಿದ್ದಾರೆ.