ಬೆಂಗಳೂರು : ಇಂದು ನಡೆದ ರಾಜ ಸಭಾ ಚುನಾವಣೆಯಲ್ಲಿ ಬಿಜೆಪಿಯ ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿಂದು ಎಸ್ ಟಿ ಸೋಮಶೇಖರ್ ರಾಜಕೀಯವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

JOB ALERT : ಕೆಪಿಎಸ್‌ಸಿ & ಬಿಎಂಟಿಸಿಯಿಂದ ಒಟ್ಟು 2,884 ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ಸಂಪೂರ್ಣ ಮಾಹಿತಿ!!

ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಸೋಮಶೇಖರ್ ಬಿಜೆಪಿ ಅಥವಾ ಮೈತ್ರಿ ಅಭ್ಯರ್ಥಿಗೆ ಮತ ಹಾಕುವ ಬದಲು ಕಾಂಗ್ರೆಸ್‌ನ ಮೂರನೇ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಂದಾಗಿದ್ದು, ಈ ಬಗ್ಗೆ ಹೈಕೋರ್ಟ್​ ಹಿರಿಯ ವಕೀಲರ ಜೊತೆ ಚರ್ಚೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಕೀಲ ವಿವೇಕ್ ರೆಡ್ಡಿ ಅವರ ಜೊತೆ ಚರ್ಚೆ ಮಾಡಿದ್ದೇನೆ. ಅವರು ಏನೆಲ್ಲಾ ಮಾಡಬಹುದು ಎಂದು ತಿಳಿಸಿದ್ದಾರೆ ಎಂದು ಹೇಳಿದರು.

ಶೃಂಗೇರಿ ಬಳಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಮುಖಾ ಮುಖಿ ಡಿಕ್ಕಿ: 20 ಕ್ಕೂ ಹೆಚ್ಚು ಜನರಿಗೆ ಗಾಯ

ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್‌ಗೂ ವಿಪ್ ಕಳಿಸಿದ್ದೆವು. ಕೊನೆಯ ಕ್ಷಣದವರೆಗೂ ನಮ್ಮ ಜೊತೆ ಮಾತಾಡಿದ್ದರು. ನಾವು ಪಕ್ಷಕ್ಕೆ ಮೋಸ ಮಾಡಲ್ಲ ಅಂದಿದ್ದರು. ತಾಯಿಗೆ ಮೋಸ ಮಾಡಲ್ಲ ಅಂದಿದ್ದರು. ಆದ್ರೆ, ಸೋಮಶೇಖರ್ ಅಡ್ಡ ಮತದಾನ ಮಾಡಿದಾರೆ ಅಂತ ಗೊತ್ತಾಗಿದೆ. ಈ ರೀತಿ ಪದೇ ಪದೇ ಮೋಸ ಮಾಡುವುದನ್ನು ಜನ ಸಹಿಸಲ್ಲ. ಸೋಮಶೇಖರ್ ಮಂತ್ರಿ ಮಾಡಿ, ಮೈಸೂರು ಉಸ್ತುವಾರಿ ಮಾಡಿದ್ದೆವು. ಅಭಿವೃದ್ಧಿಗೆ ಹಣ ಅಂತಾರೆ. ಹಿಂದೆ ಎಷ್ಟು ಬಾರಿ ಹಣ ಕೊಟ್ಟಿಲ್ಲ? ಎಂದು ಆಕ್ರೋಶ ಹೊರಹಾಕಿದರು.

ಹಳೆ ಪಿಂಚಣಿ (OPS) ಜಾರಿ ಬಗ್ಗೆ ‘ಮಹತ್ವದ’ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ!

Share.
Exit mobile version