ಬೆಂಗಳೂರು: ನಾನು ಕೇಂದ್ರ ಸಚಿವನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ, ಊಟ ಸೇರುತ್ತಿಲ್ಲ. ನಾನು ಯಾರ ಮೇಲೂ ದ್ವೇಷ ಸಾಧಿಸಲ್ಲ. ಆ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ಭೇಟಿ ಕೊಟ್ಟ ವೇಳೆ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಾನು ಕೇಂದ್ರ ಸರಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವನಾಗಿರಬಹುದು. ರಾಜ್ಯದ ಹಿತವನ್ನು ಎಂದಿಗೂ ಮರೆಯಲಾರೆ. ಬನ್ನಿ, ಯಾವುದೇ ಇಲಾಖೆಯ ಏನೇ ಕೆಲಸಗಳು ಇದ್ದರೂ ಮಾಡಿಕೊಡುತ್ತೇನೆ. ನನಗೆ ಸ್ವಲ್ಪ ಸಮಯ ಬೇಕು ಎಂದು ಹೇಳಿದರು.
ರಾಜಕೀಯದಲ್ಲಿ ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನೆರೆಯ ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಹಿಂದಿನ ಚುನಾವಣೆಯಲ್ಲಿ ಎಷ್ಟು ಸ್ಥಾನಗಳನ್ನು ಗೆದ್ದಿದ್ದರು? ಕಡೆಗೆ ಅನೇಕ ಶಾಸಕರು ಅವರನ್ನು ಬಿಟ್ಟು ಹೋದರು. ಅವರನ್ನು ಜೈಲಿಗೂ ಕಳಿಸಿದರು. ಈಗ ಮತ್ತೆ ಎಷ್ಟು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದರು ಎನ್ನುವುದನ್ನು ಗಮನಿಸಬೇಕು. ಕರ್ನಾಟಕದಲ್ಲಿಯೂ ಇದು ನಡೆಯುತ್ತದೆ. ಒಂದು ಸಲ ಅವಕಾಶ ಕೊಡಿ ಅಂತಾ ಕೇಳಿದೆ. ನಾನು ಹೇಳಿದ ಕಾರ್ಯಕ್ರಮಗಳನ್ನು ಅನುಷ್ಟಾನ ಮಾಡಿಡಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದೆ. ಅದಕ್ಕೂ ಅವಹೇಳನ ಮಾಡಿದರು. ಚಕ್ರ ತಿರುಗುತ್ತದೆ ಎನ್ನುವುದನ್ನು ಯಾರೂ ಮರೆಯಬಾರದು ಎಂದು ಹೇಳಿದರು.
ಕಾರ್ಯಕರ್ತರ ಗೌರವ ಉಳಿಸುವ ನಿಟ್ಟಿನಲ್ಲಿ ನಿಮ್ಮ ಕೆಲಸ ಮಾಡುತ್ತೇನೆ. ಕುಮಾರಸ್ವಾಮಿ ಕೇಂದ್ರದ ಸಚಿವರಾಗಿದ್ದಾರೆ. ನಮ್ಮ ಕೈಗೆ ಸಿಗಲ್ಲ ಎಂದು ಯಾರೂ ಭಾವಿಸಬೇಡಿ. ಯಾವುದೇ ಸಮಯದಲ್ಲಿ ಬಂದು ನಿಮ್ಮ ಕಷ್ಟ ಹೇಳಿಕೊಳ್ಳಬಹುದು. ನಾನೆಂದಿಗೂ ನಿಮ್ಮ ಜತೆಯಲ್ಲಿಯೇ ಇರುತ್ತೇನೆ ಎಂದರು.
ಪೊಕ್ಸೊ ಪ್ರಕರಣ, ಯಡಿಯೂರಪ್ಪ ಅವರಿಗೆ ಜಾಮೀನು, ನ್ಯಾಯ ಸಮ್ಮತ: ಬಸವರಾಜ ಬೊಮ್ಮಾಯಿ
ಅರುಂಧತಿ ರಾಯ್, ಶೌಕತ್ ಹುಸೇನ್ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ | Arundhati Roy