ಬೆಂಗಳೂರು: ಬಿಜೆಪಿಯಲ್ಲಿ ಇರುವಂತಹ ಕೆಲವೇ ಕೆಲವರು ಕುಮಾರಸ್ವಾಮಿಗೆ ದೆಹಲಿ ಮಟ್ಟದಲ್ಲಿ ಉತ್ತಮ ಬಾಂಧವ್ಯ ಇದೆ. ಹೀಗಾಗಿ ಅವರಿಗೆ ಏನಾದರೂ ಸಮಸ್ಯೆ ಉದ್ಭವ ಮಾಡಬೇಕು ಎನ್ನುವ ಕಾರಣಕ್ಕೆ ಇಂತಹ ಪ್ರಕರಣಗಳನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಅಂತ ಕೆಲವರು ಮಾತಾಡಿಕೊಳ್ಳುತ್ತಿದ್ದಾರೆ. ಅದು ನನ್ನ ಕಿವಿಗೂ ಬಿದ್ದಿದೆ. ಬಿಜೆಪಿ – ಜೆಡಿಎಸ್ ಮೈತ್ರಿಗೆ ಹುಳಿ ಹಿಂಡುವವರು ಬಹಳಷ್ಟು ಜನ ಇದ್ದಾರೆ. ಒಟ್ಟಾರೆ ಕುಮಾರಸ್ವಾಮಿಯನ್ನು ಹಾಳು ಮಾಡಲು ಹೊರಟಿದ್ದಾರೆ. ಅವರ ಪ್ರಯತ್ನ ಫಲ ಕೊಡುವುದಿಲ್ಲ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.
ಹುಳಿ ಹಿಂಡುವವರು ನಮ್ಮ ಪಕ್ಷದಲ್ಲಿ ಇಲ್ಲ. ಆದರೆ ಅಲ್ಲಿನ ಹುಳಿ ಹಿಂಡುವವರು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡಿದ್ದಾರೆ. ಅದು ನನಗೆ ಗೊತ್ತಿದೆ. ಪ್ರಧಾನ ಮಂತ್ರಿ ಅವರನ್ನು ಅಸ್ಥಿರಗೊಳಿಸಲು ಅವರು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡು ಮಸಲತ್ತು ಮಾಡುತ್ತಿರಬಹುದು. ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಧಕ್ಕೆ ಆಗಬಾರದು. ಇದೆಲ್ಲವನ್ನು ಗಮನಿಸುತ್ತಿದ್ದೇನೆ. ಇದಕ್ಕೆ ನಾನು ಅವಕಾಶ ಕೊಡಬೇಕಾ? ಎಂದು ಅವರು ಪ್ರಶ್ನಿಸಿದರು.
ಇಂತ ಕುತಂತ್ರಕ್ಕೆ ನಾನು ಯಾಕೆ ಬಲಿಯಾಗಬೇಕು? ನೋಡೋಣ, ಮುಂದೆ ಅಭ್ಯರ್ಥಿ ತೀರ್ಮಾನ ಮಾಡುತ್ತೇವೆ. ನನಗೆ ಬೇಕಿರುವುದು ಪ್ರಧಾನಮಂತ್ರಿಯವರಿಗೆ ಶಕ್ತಿ ತುಂಬುವುದಷ್ಟೇ. ಆ ನಿಟ್ಟಿನಲ್ಲಿ ನಾನು ತೀರ್ಮಾನ ಮಾಡುತ್ತೇನೆ. ಆ ನಿಟ್ಟಿನಲ್ಲಿ ಚನ್ನಪಟ್ಟಣ ಸೀಟು ಗೆಲ್ಲಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಹುನ್ನಾರಕ್ಕೆ ಬಲಿ ಆಗುವುದಿಲ್ಲ.
ನಿಮ್ಮ ಕುಟುಂಬದಿಂದಲೇ ಯಾರಾದರೂ ಸ್ಪರ್ಧೆ ಮಾಡುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ಇಲ್ಲಿವರೆಗೂ ಎಲ್ಲೂ ನಮ್ಮ ಕುಟುಂಬದವರು ಸ್ಪರ್ಧೆ ಮಾಡುತ್ತಾರೆ ಎಂದು ನಾನು ಹೇಳಿಲ್ಲ. ನಾನು ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ನೂರು ಬಾರಿ ಹೇಳಿದ್ದಾರೆ. ಚುನಾವಣೆಯಲ್ಲಿ ನಿಲ್ಲಲ್ಲ.. ಇನ್ನು ಮೂರು ವರ್ಷ ಕಾಯುತ್ತೇನೆ ಎಂದು ಅವರು ಹೇಳಿದ್ದಾರೆ. ನಾನೇನಾದರೂ ಹೇಳಿದ್ದೀನಾ? ನಿಖಿಲ್ ಕುಮಾರಸ್ವಾಮಿ ನಿಲ್ಲುತ್ತಾರೆ ಎಂದು. ನಾನು ಹೇಳಿರುವುದು ಎನ್‌ಡಿಎ ಅಭ್ಯರ್ಥಿ ನಿಲ್ಲುತ್ತಾರೆ ಎಂದು. ಅದು ಬಿಜೆಪಿಯಿಂದ ಅಥವಾ ಜೆಡಿಎಸ್ ನಿಂದ ಆದರೂ ಆಗಬಹುದು ಅಂತ ಅಷ್ಟೇ. ಅಭ್ಯರ್ಥಿ ನಿಲ್ಲಿಸಲೇಬೇಕಲ್ವಾ? ಪಲಾಯನ ಮಾಡೋಕಾಗುತ್ತಾ?ಯಾವುದೇ ಕಾರಣಕ್ಕೂ ಕಾಂಗ್ರೆಸ್ ಇಲ್ಲಿ ಲಾಭ ಪಡೆಯಲು ಸಾಧ್ಯವಿಲ್ಲ. ಏಕೆಂದರೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಬಲಯುತವಾಗಿಲ್ಲ. ಆ ಪಕ್ಷಕ್ಕೆ ಅಲ್ಲಿ ಕಾರ್ಯಕರ್ತರ ಪಡೆಯೇ ಇಲ್ಲ. ಹಣದ ಮುಖಾಂತರ ಅಧಿಕಾರದ ದುರುಪಯೋಗದ ಮೂಲಕ ರಾಜಕಾರಣ ಮಾಡಬೇಕು ಅಷ್ಟೆ. ಕಳೆದ 25 ವರ್ಷಗಳಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ 3ನೇ ಸ್ಥಾನದಲ್ಲಿದೆ. ಈಗ ಕಾಂಗ್ರೆಸ್ಸಿನ ಕುತಂತ್ರಕ್ಕೆ ಕೆಲವರು ಬಲಿಯಾಗಲು ಹೊರಟಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿಕೆಶಿಯನ್ನು ಭೇಟಿಯಾಗಿದ್ದಾರೆ: HDK ಸ್ಪೋಟಕ ಹೇಳಿಕೆ
Rain Alert : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ : ಈ 13 ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ
BREAKING : ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ : ಭದ್ರತಾ ಪಡೆಗಳಿಂದ ಮುಂಜಾಗ್ರತಾ ಕ್ರಮ