ಮೈಸೂರು: ಸಿದ್ದರಾಮಯ್ಯ ಹುಟ್ಟುಹಬ್ಬ ದಿನದಂದು ಸಿದ್ದರಾಮೋತ್ಸವ ಮಾಡಲು ಸಕಲ ಸಿದ್ಧತೆ ನಡೆಯುತ್ತಿದೆ. ಇದಕ್ಕೆ ಇದೀಗ ಹೆಚ್ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಕೈ ಜೋಡಿಸಿದ್ದಾರೆ. ಅಪ್ಪ -ಮಗ ಇಬ್ಬರು ಸಿದ್ದರಾಮಯ್ಯ ಪರ ನಿಂತಿದ್ದಾರೆ.
ಈಗಾಗಲೇ MLC ಹೆಚ್ ವಿಶ್ವನಾಥ್ ಅವರು ಸಿದ್ದರಾಮಯ್ಯ ವಿರುದ್ಧ ಸದಾ ಟೀಕೆ ಮಾಡುತ್ತಿದ್ದಾರೆ. ಇತ್ತ,ಇತ್ತ ಸಿದ್ದರಾಮಯ್ಯ ಪರ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ನಿಂತಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಅಮಿತ್ ಭಾಗಿಯಾಗಿದ್ದರು.
ಕುರುಬ ಸಮುದಾಯದ ಪ್ರಮುಖ ಮುಖಂಡರಿಂದ ಪೂರ್ವಭಾವಿ ಸಭೆ ನಡೆದಿತ್ತು. ಸಭೆಯಲ್ಲಿ ಭಾಗಿಯಾಗಿದ್ದ ವಿಶ್ವನಾಥ್ ಪುತ್ರ ಅಮಿತ್,
ಸಿದ್ದರಾಮೋತ್ಸವಕ್ಕೆ ಜನರನ್ನ ಸೇರಿಸುವ ಹೊಣೆ ಅಮಿತ್ ಹೊತ್ತಿಕೊಂಡಿದ್ದಾರೆ.
ನಾನು ಜಿ.ಪಂನಲ್ಲಿ ಗೆಲ್ಲಲು ಸಿದ್ದರಾಮಯ್ಯ ಕಾರಣ.ನನ್ನ ಪರ ಪ್ರಚಾರಕ್ಕೆ ಬಂದು ನನ್ನನ್ನು ಸಿದ್ದರಾಮಯ್ಯ ಗೆಲ್ಲಿಸಿದರು ಎಂದಿದ್ದಾರೆ. ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ. ನಾವು(ಕುರುಬ ಸಮಾಜದವರು) ಮತ್ತಷ್ಟು ಹೊಳಪು ನೀಡುವ ಕೆಲಸ ಮಾಡಬೇಕು.ಶಾಸಕ ಹೆಚ್ ಪಿ ಮಂಜುನಾಥ್, ಮುಖಂಡ ರವಿಶಂಕರ್ ಜೊತೆಗೂಡಿ ಹೆಚ್ಚಿನ ಜನರನ್ನ ಸೇರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.