ದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೂರನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಇಂದು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಿದ್ದಾರೆ.
ಅವರು ತಮ್ಮ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ದೆಹಲಿಯಲ್ಲಿರುವ ಫೆಡರಲ್ ಏಜೆನ್ಸಿಯ ಕಚೇರಿಯನ್ನು ತಲುಪಿದರು.
Delhi | Congress interim president Sonia Gandhi accompanied by her daughter Priyanka Gandhi Vadra arrives at the Enforcement Directorate office for the third round of questioning in the National Herald case pic.twitter.com/tmnUsjSXuB
— ANI (@ANI) July 27, 2022
ನಿನ್ನೆ ಇಡಿ ಅಧಿಕಾರಿಗಳು ಸೋನಿಯಾ ಅವರನ್ನು ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.