ಬೆಂಗಳೂರು: ‘ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹೆಸರಲ್ಲಿ ಕೇಂದ್ರ ಸರ್ಕಾರವು ಸಂವಿಧಾನಿಕ ಸಂಸ್ಥೆ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲು ಮುಂದಾಗಿದೆ. ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ಜುಲೈ 21 ರಂದು ‘ರಾಜಭವನ ಮುತ್ತಿಗೆ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರು ಶನಿವಾರ ಸಂಜೆ ಪಕ್ಷದ ಶಾಸಕರು, ಮಾಜಿ ಶಾಸಕರು, ಸಂಸದರು, ಪದಾಧಿಕಾರಿಗಳು ಹಾಗೂ ಇತರ ಮುಖಂಡರು ಸೇರಿದಂತೆ 600ಕ್ಕೂ ಹೆಚ್ಚು ನಾಯಕರ ಜೊತೆ ತುರ್ತು ಸಭೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಸರ್ಕಾರ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳ ನಾಯಕರ ಮೇಲೆ ನಡೆಸುತ್ತಿರುವ ದೌರ್ಜನ್ಯ ಕುರಿತು ಚರ್ಚಿಲಾಯಿತು.
BREAKING NEWS : ಶಿವಮೊಗ್ಗದಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ತಾಯಿ,ಮಗ ಸಾವು
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಇದೇ 21ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಇದೇ ಸಮಯದಲ್ಲಿ ಸೋನಿಯಾ ಗಾಂಧಿಯವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ. ಕಳೆದ ತಿಂಗಳು ಐದು ದಿನ 50 ಗಂಟೆಗಳ ಕಾಲ ರಾಹುಲ್ ಗಾಂಧಿ ಅವರಿಗೆ ವಿಚಾರಣೆ ಹೆಸರಲ್ಲಿ ಕಿರುಕುಳ ನೀಡಲಾಗಿತ್ತು. ಅಧಿಕಾರಿಗಳು ಸುಧೀರ್ಘ ತನಿಖೆ ನಡೆಸಿದರೂ ರಾಹುಲ್ ಗಾಂಧಿಯವರ ವಿರುದ್ಧ ಯಾವುದೇ ಸಾಕ್ಷಾಧಾರಗಳನ್ನು ಒದಗಿಸಲು ಸಾಧ್ಯವಾಗಲಿಲ್ಲ. ನಮ್ಮ ಪಕ್ಷ ಹಾಗೂ ನಾಯಕರ ಘನತೆಗೆ ಕಪ್ಪು ಚುಕ್ಕೆ ಇಡುವ ಪ್ರಯತ್ನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರದೆಲ್ಲೆಡೆ ಪಕ್ಷದ ನಾಯಕರು ಜುಲೈ 21 ರಂದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.
ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಎಲ್ಲಾ ಶಾಸಕರು, ನಾಯಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಈ ಸಂದರ್ಭದಲ್ಲಿ ಪೊಲೀಸರು ನಮ್ಮನ್ನು ಬಂಧಿಸಿದರೂ ಪರವಾಗಿಲ್ಲ. ಎಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ನಾವು ಜನರ ಪರ ಮೇಕೆದಾಟು ಹಾಗೂ ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರವಾಗಿ ಹೋರಾಟ ಮಾಡಿದಾಗ ಬಿಜೆಪಿ ಸರ್ಕಾರ ನಮ್ಮ ಮೇಲೆ ಪ್ರಕರಣ ದಾಖಲಿಸಿದೆ. ಬಂಧನ, ಕೇಸಿಗೆ ಹೆದರದೆ ಪಕ್ಷಕ್ಕಾಗಿ ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಜುಲೈ 21ರಂದು ಎಲ್ಲಾ ನಾಯಕರು ಫ್ರೀಡಂ ಪಾರ್ಕ್ ನಲ್ಲಿ ಸೇರಿ, ಅಲ್ಲಿಂದ ರಾಜಭವನ ಚಲೋ ಪ್ರತಿಭಟನೆ ಮೂಲಕ ರಾಜ್ಯಭವನಕ್ಕೆ ಮುತ್ತಿಗೆ ಹಾಕಬೇಕು. ಜುಲೈ 22 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇದೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕೇಂದ್ರದ ನಮ್ಮ ನಾಯಕರು, ಪದಾಧಿಕಾರಿಗಳು ತಮ್ಮ, ತಮ್ಮ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾರೆ. 30 ಜಿಲ್ಲೆಗಳಿಗೆ ಪಕ್ಷದ ವತಿಯಿಂದ ವೀಕ್ಷಕರನ್ನು ಕಳುಹಿಸಿಕೊಡಲಾಗುವುದು ಎಂದರು.
ನಾನು, ಸಿದ್ದರಾಮಯ್ಯ, ಹರಿಪ್ರಸಾದ್, ಎಂ.ಬಿ ಪಾಟೀಲ್ ಸೇರಿದಂತೆ ಹಿರಿಯ ನಾಯಕರು, ಕಾರ್ಯಧ್ಯಕ್ಷರು ಒಂದೊಂದು ಜಿಲ್ಲೆಗೆ ಹೋಗಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ನಾವೆಲ್ಲರೂ ಪ್ರತಿಭಟನೆ ಮಾಡಿ ಸೋನಿಯಾ ಗಾಂಧಿಯವರಿಗೆ ಧೈರ್ಯ ತುಂಬಬೇಕು. ಸುಳ್ಳು ಪ್ರಕರಣಗಳ ಮೂಲಕ ಸರ್ಕಾರ ನಮ್ಮನ್ನು ಬೆದರಿಸುವ ಪ್ರಯತ್ನ ಮಾಡುತ್ತಿದ್ದು, ಅದಕ್ಕೆ ನಾವು ಜಗ್ಗುವುದಿಲ್ಲ ಎಂಬ ಸಂದೇಶ ರವಾನಿಸಬೇಕು ಎಂದು ತಿಳಿಸಿದರು.
BIGG NEWS : ನಮ್ಮ ಸಚಿವರು ಕುರ್ಚಿಗೆ ಅಂಟಿಕೊಂಡಿದ್ದಾರೆ : ಬಿಜೆಪಿ ಹಿರಿಯ ನಾಯಕರ ಶಾಸಕ ರೇಣುಕಾಚಾರ್ಯ ಕಿಡಿ!
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಹೀಗಾಗಿ 75 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 1 ರಿಂದ 10 ರವರೆಗೂ ಎಲ್ಲಾ ಜಿಲ್ಲೆಗಳಲ್ಲಿ 75 ಕಿ.ಮೀ ಪಾದಯಾತ್ರೆ ಮಾಡಲಾಗುವುದು. ಯಾವ ಜಿಲ್ಲೆಯಲ್ಲಿ ಎಷ್ಟು ದಿನ ಪಾದಯಾತ್ರೆ ಮಾಡಬೇಕು ಎಂಬ ವಿಚಾರವಾಗಿ ಆಯಾ ಜಿಲ್ಲೆಗಳಿಗೆ ತೀರ್ಮಾನ ಮಾಡುವ ಅಧಿಕಾರ ನೀಡಲಾಗಿದೆ. ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ರಾಷ್ಟ್ರಧ್ವಜ ಹಿಡಿದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ಮೈದಾನದವರೆಗೆ ‘ಸ್ವಾತಂತ್ರ್ಯ ನಡಿಗೆ ‘ ಮಾಡಲಾಗುವುದು ಎಂದು ಹೇಳಿದರು.
ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಎಲ್ಲಾ ಸಂಘ-ಸಂಸ್ಥೆಗಳು ಇದರಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಇದರಲ್ಲಿ ಭಾಗವಹಿಸಲು ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಯಾವುದೇ ಭಾಷಣ ಇರುವುದಿಲ್ಲ, ಎಲ್ಲರೂ ರಾಷ್ಟ್ರಧ್ವಜ ಹಿಡಿದು ಹೆಜ್ಜೆ ಹಾಕಲಾಗುವುದು. ರಾಷ್ಟ್ರಕ್ಕೆ ಗೌರವ ಸಲ್ಲಿಸುವ ಸಾಂಸ್ಕೃತಿಕ ಕಾರ್ಯಕ್ರಮ ಇದೇ. ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮ ಅಂತ್ಯವಾಗಲಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಿಂದ 300 ರಿಂದ 500 ಜನರು ಭಾಗವಹಿಸಬೇಕು. ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳ ಕ್ಷೇತ್ರಗಳಿಂದ ಕನಿಷ್ಠ 3-4 ಸಾವಿರ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಬಿಹಾರದಲ್ಲಿ ಪ್ರಧಾನಿ ಮೋದಿ ರ್ಯಾಲಿ ವೇಳೆ ಗಲಭೆ ಸೃಷ್ಟಿಸಲು ಯೋಜಿಸಿದ್ದ ಆರೋಪ: PFI ಸದಸ್ಯನ ಬಂಧನ
ಎಲ್ಲಾ ಸಂಘ ಸಂಸ್ಥೆಗಳು, ಸಾಹಿತಿಗಳು, ಕಲಾವಿದರು, ಉದ್ಯಮಿಗಳು, ಶಿಕ್ಷಣ ಸಂಸ್ಥೆಗಳು, ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗುವುದು ಎಂದು ಹೇಳಿದರು.
ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಈ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಮುಖ್ಯಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿ ಅನುಮತಿ ಕೋರಲಾಗುವುದು. ಬಸವನಗುಡಿ ಮೈದಾನದಲ್ಲಿ ಅನುಮತಿ ನೀಡಲಾಗದಿದ್ದರೆ ಕಂಠೀರವ ಕ್ರೀಡಾಂಗಣದಲ್ಲಿ ನಮ್ಮ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಮನವಿ ಮಾಡಲಾಗುವುದು. ಇದು ರಾಜಕೀಯ ಕಾರ್ಯಕ್ರಮವಲ್ಲ ದೇಶದ ಕಾರ್ಯಕ್ರಮ. ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮದ ಮುಂದಾಳತ್ವ ವಹಿಸಿದೆ. ಸ್ವಾತಂತ್ರ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿರುವ ರಾಜ್ಯದ 10 ಪ್ರಮುಖ ಸ್ಥಳಗಳಿಗೆ ನಮ್ಮ ನಾಯಕರುಗಳು ಭೇಟಿ ನೀಡಿ ಗೌರವ ಸಲ್ಲಿಸಲಿದ್ದಾರೆ .
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ನೀಡಿರುವ ಅಂಕಿ ಅಂಶಗಳು ಪ್ರಕರಣದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ‘ಈ ಪ್ರಕರಣದಲ್ಲಿ ಯಾವುದೇ ಹುರಳಿಲ್ಲ ಎಂದು ಬಿಜೆಪಿಯವರಿಗೆ ತಿಳಿದಿದೆ. ಸ್ವತಃ ಅರುಣ್ ಜೇಟ್ಲಿ ಅವರೇ ಸಂಸತ್ತಿನಲ್ಲಿ ಈ ಪ್ರಕರಣದಲ್ಲಿ ಯಾವುದೇ ಅಕ್ರಮವಿಲ್ಲ ಎಂದು ಹೇಳಿದ್ದರು. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ನ್ಯಾಷನಲ್ ಹೆರಾಲ್ಡ್ ಆಸ್ತಿಯನ್ನು ತಮ್ಮ ಆಸ್ತಿ ಎಂದು ಹೇಳಿಕೊಂಡಿದ್ದಾರಾ? ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಸ್ಥೆಗಳ ಜವಾಬ್ದಾರಿ ನನ್ನ ಮೇಲಿರುತ್ತದೆ. ಹಾಗೆಂದು ಪಕ್ಷದ ಆಸ್ತಿಯೆಲ್ಲ ನನ್ನದು ಎಂದು ಹೇಳಲು ಸಾಧ್ಯವೇ? ನೆಹರೂ ಅವರ ಕಾಲದಿಂದಲೂ ಕಾಂಗ್ರೆಸ್ ಪಕ್ಷದ ಆಚಾರ, ವಿಚಾರಗಳನ್ನು ಜನರಿಗೆ ತಿಳಿಸಿಕೊಂಡು ಬರುವ ಈ ಮಾಧ್ಯಮ ಸಂಸ್ಥೆಯ ಒಡೆತನವನ್ನು ಕಾಂಗ್ರೆಸ್ ಪಕ್ಷವೇ ಹೊಂದಿದೆ.
Big news: ಕೇವಲ 18 ತಿಂಗಳಲ್ಲಿ 2 ಬಿಲಿಯನ್ ಕೋವಿಡ್ ಲಸಿಕೆ ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಭಾರತ!
ಖಾಸಗಿ ಕಂಪನಿಗಳೇ ಬೇರೆ, ಚಾರಿಟಬಲ್ ಟ್ರಸ್ಟ್ ಗಳ ವತಿಯಿಂದ ನಡೆಯುವ ಸಂಸ್ಥೆಗಳೇ ಬೇರೆ. ಟ್ರಸ್ಟ್ ಗಳ ವತಿಯಿಂದ ನಡೆಯುವ ಸಂಸ್ಥೆಗಳ ಜವಾಬ್ದಾರಿ ಆ ಟ್ರಸ್ಟ್ ನ ಮುಖ್ಯಸ್ಥರು ಬದಲಾದಂತೆ ಬದಲಾಗುತ್ತದೆ. ಈ ಹಿಂದೆ ಈ ಸಂಸ್ಥೆಗಾಗಿ ಖರೀದಿಸಿದ್ದ ಆಸ್ತಿಯ ಮೌಲ್ಯ ಇಂದು ಹೆಚ್ಚಾಗಿದೆ. ಬಂಗಾರಪ್ಪ ಅವರ ಕಾಲದಲ್ಲಿ ನನಗೆ ಒಂದು ಲಕ್ಷ ರೂ ಮೊತ್ತಕ್ಕೆ ಒಂದು ನಿವೇಶನ ನೀಡಿದ್ದರು. ಈಗ ಅದರ ಮೌಲ್ಯ ನಾಲ್ಕರಿಂದ ಐದು ಕೋಟಿಗೆ ಏರಿಕೆಯಾಗಿದೆ.
ನಾನು ವಿದ್ಯಾರ್ಥಿ ದಿನಗಳಲ್ಲಿ ಬೆಂಗಳೂರಿಗೆ ಬಂದಾಗ ನಮ್ಮ ಊರಿನಲ್ಲಿದ್ದ ಜಮೀನು ಮಾರಿ ಬೆಂಗಳೂರಿನಲ್ಲಿ 50,000 ಮೊತ್ತಕ್ಕೆ ಒಂದು ಎಕರೆ ಜಮೀನು ಖರೀದಿಸಿದೆ. ಈಗ ಆಧಾರ ಮೌಲ್ಯ 15 ಕೋಟಿ ರೂಪಾಯಿಯಷ್ಟು ಏರಿಕೆಯಾಗಿದೆ. ಹೀಗೆ ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಆಸ್ತಿಯ ಮೌಲ್ಯ ದಿನೇ ದಿನೇ ಏರಿಕೆಯಾಗಿದೆ. ಈ ಆಸ್ತಿಯನ್ನು ಗುಳುಂ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಸುಳ್ಳು ಆರೋಪ ಮಾಡಲಾಗಿದೆ. ಗಾಂಧಿ ಕುಟುಂಬ ಅಲಹಾಬಾದ್ ನಲ್ಲಿ 25 ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ತ್ಯಾಗ ಮಾಡಿದ್ದಾರೆ. ನೆಹರು ಕುಟುಂಬ ದೇಶಕ್ಕಾಗಿ ಸೆರೆವಾಸ ಅನುಭವಿಸಿ, ಪ್ರಾಣ ತ್ಯಾಗ ಮಾಡಿ ದೇಶಕ್ಕೆ ಸೇವಿ ಸಲ್ಲಿಸಿದೆ.
ಸ್ವಾತಂತ್ರ್ಯ ಹೋರಾಟದಿಂದ ಈ ದೇಶ ನಿರ್ಮಾಣದವರೆಗೂ ಗಾಂಧಿ ಕುಟುಂಬದ ಕೊಡುಗೆ ಹಾಗೂ ಅದಕ್ಕೆ ಮಾಡಿರುವ ತ್ಯಾಗ ಅಪಾರವಾದದ್ದು. ತಾವೇ ಪ್ರಧಾನಮಂತ್ರಿ ಯಾಗುವ ಅವಕಾಶ ಬಂದಿದ್ದರೂ ದೇಶದ ಹಿತಕ್ಕಾಗಿ ಒಬ್ಬ ಆರ್ಥಿಕ ತಜ್ಞರಿಗೆ ಅಧಿಕಾರವನ್ನು ತ್ಯಾಗ ಮಾಡಿದ ಇತಿಹಾಸ ಗಾಂಧಿ ಕುಟುಂಬಕ್ಕೆ ಇದೆ.
ಬಿಜೆಪಿಯ ಯಾವ ನಾಯಕರು ಸ್ವಾತಂತ್ರ್ಯ ಹೋರಾಟಕ್ಕಾಗಲಿ, ರಾಷ್ಟ್ರ ನಿರ್ಮಾಣಕ್ಕಾಗಲಿ ಯಾವ ತ್ಯಾಗ ಮಾಡಿದ್ದಾರೆ? ಬಿಜೆಪಿಯವರು ಈ ಬಾರಿ ಸ್ವಾತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇದು ಸಂತೋಷದ ವಿಚಾರ. ಆದರೆ ಸ್ವಾತಂತ್ರ್ಯ ಬಂದ 75 ವರ್ಷಗಳ ಕಾಲ ಬಿಜೆಪಿಯವರು ಹಾಗೂ ಆರ್ ಎಸ್ ಎಸ್ ನವರು ತಮ್ಮ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿರಲಿಲ್ಲ ಏಕೆ? ಬಿಜೆಪಿಯವರು ಈ ತ್ರಿವರ್ಣ ಧ್ವಜ ನೋಡಿದರೆ ಅಸೂಯೆ ಪಡುತ್ತಿದ್ದರು’ ಎಂದು ತಿಳಿಸಿದರು.
ಈ ಪ್ರಕರಣ ಚುನಾವಣಾ ಪಿತೂರಿಯೇ ಎಂಬ ಪ್ರಶ್ನೆಗೆ, ‘ ತ್ಯಾಗಕ್ಕೆ ಮತ್ತೊಂದು ಹೆಸರೇ ಶ್ರೀಮತಿ ಸೋನಿಯಾ ಗಾಂಧಿ. ಪಕ್ಷ ವಿಭಜನೆ ಯಾಗುತ್ತಿರುವ ಸಂದರ್ಭದಲ್ಲಿ ನಾವೆಲ್ಲರೂ ಹೋಗಿ ಪಕ್ಷ ಉಳಿಸುವಂತೆ ಅವರಲ್ಲಿ ಮನವಿ ಮಾಡಿಕೊಂಡೆವು. ಆಗ ಅವರು ಪಕ್ಷದ ನೇತೃತ್ವ ವಹಿಸಿಕೊಂಡು ಹತ್ತು ವರ್ಷಗಳ ಕಾಲ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ದೇಶದಲ್ಲಿ ಜನಪರವಾದ ಕಾನೂನು ತಿದ್ದುಪಡಿ ಆಗಿರುವುದು ಕೇವಲ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ’ ಎಂದು ಪ್ರತಿಕ್ರಿಯಿಸಿದರು.