ಮೈಸೂರು : ಭಾರತ್ ಜೋಡೋ ಪಾದಯಾತ್ರೆಯಲ್ಲಿ (Bharat Jodo Yatra) ಪಾಲ್ಗೊಳ್ಳಲು ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ.
ಅಕ್ಟೋಬರ್ 4 ರಂದು ಬೆಳಿಗ್ಗೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಾಳೆ ಮೈಸೂರು ನಗರದಿಂದ Ts ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ನಂತರ ಎಸಿಸಿಸಿ ಅಧ್ಯಕ್ಷ ಚುನಾವಣೆ ಕುರಿತು ರಾಹುಲ್ ಜೊತೆ ಚರ್ಚಿಸಲು ಮಡಿಕೇರಿಗೆ ಸೋಮವಾರ ಮಧ್ಯಾಹ್ನ 12.30ಕ್ಕೆ ಬರಲಿದ್ದಾರೆ. ವಿಮಾನ ನಿಲ್ದಾಣದಿಂದ ಮೈಸೂರಿಗೆ ಆಗಮಿಸಲಿರುವ ಸೋನಿಯಾಗಾಂಧಿ ಅವರು ಸೋಮವಾರದ ಯಾತ್ರೆ ಮುಗಿಸಿ ಹೆಲಿಕ್ಯಾಪ್ಟರ್ನಲ್ಲಿ ಮಡಿಕೇರಿಗೆ ಪ್ರಯಾಣಿಸಲಿದ್ದಾರೆ.
ಅ. 4, 5ರಂದು ಕೊಡಗು ಭಾಗದ ರೆಸಾರ್ಟ್ವೊಂದರಲ್ಲಿ ವಾಸ್ತವ್ಯ ಮಾಡಲಿದ್ದು, ಈ ವೇಳೆಯಲ್ಲಿ ಮುಂಬರುವ ಕರ್ನಾಟಕ ಚುನಾವಣೆ ಸೇರಿದಂತೆ ಇನ್ನಿತರ ಬಗ್ಗೆ ಚರ್ಚೆ ನಡೆಸಲಿದ್ದಾರೆ.