ಮುಂಬೈ: ದೇಶದ ಖ್ಯಾತ ಗಾಯಕ ಸೋನು ನಿಗಮ್ ಲೈವ್ ಪ್ರದರ್ಶನ ನೀಡುವಾಗ ಬೆನ್ನಿಗೆ ಭಾರಿ ಸೆಳೆತಕ್ಕೆ ಒಳಗಾದರು.ಆದಾಗ್ಯೂ, ಅವರ ನೋವನ್ನು ನಿವಾರಿಸಿಕೊಂಡು, ಅವರು ಪ್ರತಿ ಬಾರಿಯಂತೆ ಅದ್ಭುತ ಪ್ರದರ್ಶನವನ್ನು ನೀಡಿದರು.
ಸೋನು ನಿಗಮ್ ತಮ್ಮ ಇನ್ಸ್ಟಾಗ್ರಾಮ್ ವೀಡಿಯೊವನ್ನು ಪೋಸ್ಟ್ ಮಾಡಿ, ತಮ್ಮ ನೋವನ್ನು ವಿವರಿಸಿದ್ದಾರೆ. “ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನೋವು ಕಾಣಿಸಿಕೊಂಡಿತು. ಆದರೆ, ಹೇಗೋ ಮ್ಯಾನೇಜ್ ಮಾಡಿದೆ. ಜನರು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ’ ಎಂದು ಅವರು ಹೇಳಿದ್ದಾರೆ.
‘ಅತಿಯಾದ ನೋವು ಕಾಣಿಸಿತ್ತು. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಕಿತ್ತು ಬರುತ್ತಿತ್ತು’ ಎಂದು ಅವರು ಹೇಳಿರೋ ಅವರು ವಿಡಿಯೋ ಕ್ಯಾಪ್ಶನ್ನಲ್ಲಿ ‘ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು’ ಎಂದಿದ್ದಾರೆ.