ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯದಾದ್ಯಂತ ಮನೆಮನೆಗೆ ಪೊಲೀಸ್ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕರಿಗೆ ತೊಂದರೆ ಇದ್ದರೆ, ಪೊಲೀಸರ ಸಹಾಯ ಬೇಕಿದ್ದರೆ ಆಲಿಸಲಿದ್ದಾರೆ ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು. ಪಾಲಕರ ಸಭೆಗಳಲ್ಲಿ ಪೊಲೀಸರು ಭಾಗವಹಿಸಬೇಕು. ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮ, ಟ್ರಾಫಿಕ್ ನಿಯಮಗಳು ಸೇರಿದಂತೆ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ 219 ಪಿಎಸ್ಐಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದು ತಿಳಿಸಿದರು.
https://twitter.com/KarnatakaVarthe/status/1927750736135279076