ಬೆಳಗಾವಿ : ಶೀಘ್ರವೇ ರಾಜ್ಯ ಸರ್ಕಾರದಿಂದ ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಕಂದಾಯ ಸಚಿವ ಅಶೋಕ್ ( R.Ashok ) ಭರವಸೆ ನೀಡಿದ್ದಾರೆ.
ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ವಕೀಲರ ಮನವಿ ಆಲಿಸಿದ ಸಚಿವ ಅಶೋಕ್ ಶೀಘ್ರವೇ ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೆ ತರಲಾಗುತ್ತದೆ, ಸದ್ಯಕ್ಕೆ ಪ್ರತಿಭಟನೆಯನ್ನು ವಾಪಸ್ ತೆಗೆದುಕೊಳ್ಳಿ ಎಂದು ಸಚಿವರು ಭರವಸೆ ನೀಡಿದ್ದಾರೆ. ಭರವಸೆ ನೀಡಿದ ಬಳಿಕ ಪ್ರತಿಭಟನಾ ನಿರತ ವಕೀಲರು ಪ್ರತಿಭಟನೆ ವಾಪಸ್ ಪಡೆದಿದ್ದಾರೆ. ವಕೀಲರ ಸಂರಕ್ಷಣಾ ಕಾಯಿದೆ ವಿಧೇಯಕಕ್ಕೆ ಸರ್ಕಾರ ಬದ್ದವಾಗಿದೆ. ಸಿಎಂ ಸೂಚನೆ ಮೇರೆಗೆ ಪ್ರತಿಭಟನಾ ನಿರತ ವಕೀಲರ ಜೊತೆ ಮಾತನಾಡಿದ್ದೇನೆ, ವಕೀಲರು ಸಹ ಸಮಾಜದ ಒಂದು ಭಾಗವಾಗಿದ್ದಾರೆ. ವಕೀಲರ ಮೇಲೆ ನಡೆಯುವ ಹಲ್ಲೆ ತಡೆ ಕಾಯಿದೆ ಜಾರಿಗೆ ಮಾಡಲಾಗುವುದು ಎಂದರು.
ಸುವರ್ಣಸೌಧಕ್ಕೆ ಪ್ರವೇಶ ನೀಡಲು ನಿರಾಕರಿಸಿದ್ದಕ್ಕೆ ವಕೀಲರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.ಸುವರ್ಣಸೌಧ ಪ್ರವೇಶಕ್ಕೆ ಅವಕಾಶ ನೀಡದ ಕಾರಣಕ್ಕೆ ಬ್ಯಾರಿಕೇಡ್ ಪಕ್ಕಕ್ಕೆ ಸರಿಸಿ ಸುವರ್ಣಸೌಧ ನುಗ್ಗಲು ವಕೀಲರು ಯತ್ನಿಸಿದ್ದಾರೆ. ಇವರನ್ನು ತಡೆದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕಮೀಷನರ್ ಬೋರ ಲಿಂಗಯ್ಯ ಜೊತೆ ವಾಗ್ವಾದಕ್ಕಿಳಿದಿದ್ದಾರೆ.ಅಲ್ಲದೇ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ದಿಕ್ಕಾರ ಘೋಷಣೆ ಕೂಗಿದ ವಕೀಲರು ಸುವರ್ಣಸೌಧದ ಒಳಗೆ ಪ್ರವೇಶಿಸಲು ಪಟ್ಟು ಹಿಡಿದಿದ್ದಾರೆ. ವಕೀಲರ ಸಂರಕ್ಷಣೆ ಕಾಯಿದೆ ಜಾರಿ ವಿಧೇಯಕ್ಕೆ ಅಂಗೀಕಾರ ನೀಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
BIGG NEWS : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಭಾಷಣ : ಪ್ರಜ್ಞಾ ಠಾಕೂರ್ ವಿರುದ್ಧ ದೂರು ದಾಖಲು| Pragya Thakur
BREAKING NEWS : ವಕೀಲರ ಸಂರಕ್ಷಣೆ ಕಾಯಿದೆ ಜಾರಿಗೆಗೆ ಆಗ್ರಹ : ಸುವರ್ಣಸೌಧಕ್ಕೆ ನುಗ್ಗಲು ವಕೀಲರ ಯತ್ನ