ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರು ಪುಂಡಾಟಿಕೆ ಮುಂದುವರಿಸಿದ್ದಾರೆ.

ಇದೀಗ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಮತ್ತೆ ಮಹಾ ಕಿಡಿಗೇಡಿಗಳು ಪುಂಟಾಟ ಮೆರೆದಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಸಿಎಂ ಭಾವಚಿತ್ರಕ್ಕೆ ಮಸಿ ಬಳಿದಿದ್ದಾರೆ.

ಮಹಾರಾಷ್ಟ್ರದ ಭಾರಮತಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ಬಸ್ ಗೆ ಮಸಿ ಬಳಿದಿದ್ದಾರೆ.ಹಳಿಯಾಳ ಬಸ್ ಗೆ ಕಪ್ಪು ಮಸಿಯನ್ನು ಬಳಿದಿದ್ದಾರೆ. ಭಾರಮತಿ-ಹಳಿಯಾಳ ಮಧ್ಯೆ ಸಂಚರಿಸುವ ಬಸ್ ಹಿಂಬದಿ, ಪಕ್ಕ ಹಾಗೂ ಮುಂಬದಿಗೆ ಶಿವಸೇನೆ ಪುಂಡರು ಮಸಿಯನ್ನು ಹಾಕಿ ಕಿಡಿಗೇಡಿತನವನ್ನು ಮರೆದಿದ್ದಾರೆ.ಭಾರಾಮತಿಯಿಂದ ಬೆಳಗಾವಿ ಬಸ್ ನಿಲ್ದಾಣಕ್ಕೆ ಹಳಿಯಾಳ ಬಸ್ ಬಂದಿದ್ದು, ಶಿವಸೇನೆ ಪುಂಡರ ಪುಂಡಾಣಿಕೆ ಬಗ್ಗೆ ಬಸ್ ನಿರ್ವಾಹ ಭರಮಪ್ಪ ಮಾಹಿತಿ ನೀಡಿದ್ದಾರೆ. ಮಂಗಳವಾರ ರಾತ್ರಿ ಭಾರಾಮತಿ ನಿಲ್ದಾಣದಲ್ಲಿ ಬಸ್ ಅನ್ನು ನಿಲ್ಲಿಸಿದ್ದೆವು. ಈ ವೇಳೆ ಸುಮಾರು 20 ಜನ ಶಿವಸೇನೆ ಕಾರ್ಯಕರ್ತರು ಬಂದು ಕಪ್ಪು ಮಸಿ ಬಳಿದಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಿವಸೇನೆ, ನವನಿರ್ಮಾಣ ಸೇನೆ ಕಾರ್ಯಕರ್ತರು ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ತಡರಾತ್ರಿ ಕೆಎಸ್ ಆರ್ ಟಿಸಿ ಬಸ್ ಗಳಿಗೆ ಮಸಿ ಬಳಿದಿದ್ದಾರೆ. ಇದೀಗ ಗಡಿಯಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮಹಾರಾಷ್ಟ್ರಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.ಸಿಎಂ ಏಕನಾಥ್ ಶಿಂಧೆ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದಾರೆ.

BIGG NEWS : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ : ಸಿಎಂ ಬೊಮ್ಮಾಯಿ

Rain alert : ಮುಂದಿನ ಒಂದೆರಡು ದಿನಗಳ ಕಾಲ ಈ ರಾಜ್ಯಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Share.
Exit mobile version