ಶಿವಮೊಗ್ಗ: ಜಿಲ್ಲೆಯ ಸೊರಬ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಗಾಂಜಾ ಮಾರುತ್ತಿದ್ದಂತ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನವೆಂಬರ್.6, 2024ರಂದು ಸೊರಬ ಪಟ್ಟಣದ ಹಿರೇಶಕುನದ ಇಂಡಸ್ಟ್ರೀಯಲ್ ಪ್ರದೇಶದಲ್ಲಿ ಯುವಕನೊಬ್ಬ ಗಾಂಜಾ ಮಾರುತ್ತಿದ್ದಂತ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಶಿಕಾರಿಪುರ ಹಾಗೂ ಸೊರಬ ಡಿವೈಎಸ್ಪಿ ಕೇಶವ್ ಸೂಚನೆ ಮೇರೆಗೆ ಸೊರಬ ಸರ್ಕಲ್ ಇನ್ಸ್ ಪೆಕ್ಟರ್ ರಾಜಶೇಖರ್ ಮಾರ್ಗದರ್ಶನದಲ್ಲಿ ಎಸ್ಐ ಚಂದನ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆಯಲ್ಲಿ ಸಾಗರ ನಿವಾಸಿ ಮನೀಶ್ ಖಾರ್ವಿ(24) ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 10 ಸಾವಿರ ಮೌಲ್ಯದ 100 ಗ್ರಾಂ ತೂಕದ ಒಣ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇದಲ್ಲದೇ ರೂ.600 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದಂತ ಒಂದು ದ್ವಿಚಕ್ರವಾಹನವನ್ನು ಸೀಜ್ ಮಾಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಹೆಚ್ ಸಿ ರಾಜುನಾಯಕ್, ಪಿಸಿ ವಿನಯ್, ರಾಘವೇಂದ್ರ ಹಾಗೂ ಲೋಕೇಶ್, ಚಾಲಕ ಜಗದೀಶ್ ಭಾಗಿಯಾಗಿದ್ದರು. ಇಂತಹ ಕಾರ್ಯಾಚರಣೆ ನಡೆಸಿದಂತ ಸೊರಬ ಠಾಣೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕಾರ್ಯವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಶ್ಲಾಘಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!
BREAKING: ನ.20ರಂದು ರಾಜ್ಯಾದ್ಯಂತ ‘ಮದ್ಯ ಮಾರಾಟ ಬಂದ್’ ಫಿಕ್ಸ್ : ಅಧ್ಯಕ್ಷ ಗುರುಸ್ವಾಮಿ ಹೇಳಿಕೆ