ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬ ಹಿನ್ನಲೆಯಲ್ಲಿ ಬೃಹತ್ ಗ್ರಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ್ದರು. ಇಂತಹ ಮೃತರಿಗೆ ರಾಜ್ಯ ಸರ್ಕಾರದಿಂದ 2 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿತ್ತು. ಆದ್ರೇ ಪರಿಹಾರ ಕೊಡೋದಲ್ಲ ಜೊತೆಗೆ 2 ಎಕರೆ ಜಮೀನು ಕೊಟ್ಟು ಮೃತರ ಪುತ್ಥಳಿಯನ್ನು ನಿರ್ಮಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೊರಣಗಿ ಗ್ರಾಮಸ್ಥರು ಮೃತ ಯಶ್ ಅಭಿಮಾನಿಗಳಿಗೆ 2 ಲಕ್ಷ ಪರಿಹಾರವನ್ನು ಕೊಟ್ಟರೆ ಮಾತ್ರ ಸಾಲದು, ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.
ಅಂದಹಾಗೇ ನಿನ್ನೆ ಲಕ್ಷ್ಮೇಶ್ವರದ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬ ಹಿನ್ನಲೆಯಲ್ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ, ವಿದ್ಯುತ್ ಸ್ಪರ್ಶದಿಂದ ಹನುಮಂತ ಹರಿಜನ್(24), ಮುರಳಿ ನಡುವಿನಮನಿ(20) ಹಾಗೂ ನವೀನ್ ಗಾಜಿ (20) ಎಂಬುವರು ಸಾವನ್ನಪ್ಪಿದ್ದರು. ಇದಲ್ಲದೇ ಪ್ರಕಾಶ್, ಮಂಜುನಾಥ್ ಹಾಗೂ ಹನುಮಂತ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಮಲ ಹೊರುವ ಪದ್ಧತಿ ನಿಷೇಧವಿದ್ದರೂ ಜೀವಂತವಾಗಿದೆ:ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ