ಸುಭಾಷಿತ :

Tuesday, April 7 , 2020 6:50 PM

ವಿಶ್ವಕಪ್ ನಲ್ಲಿ ಇಂಡೋ-ಪಾಕ್ ಪಂದ್ಯದ ಸಚಿನ್ ಹೇಳಿಕೆಗೆ ಗಂಗೂಲಿ ಪ್ರತಿಕ್ರಿಯೆ ಏನು?


Sunday, February 24th, 2019 7:36 am

ಕೋಲ್ಕತ್ತಾ : ಪುಲ್ವಾಮ ದಾಳಿ ಬಳಿಕ ವಿಶ್ವಕಪ್ ನಲ್ಲಿ ಭಾರತ ತಂಡ ಪಾಕ್ ವಿರುದ್ಧ ಆಡಬಾರದು ಎಂಬ ಕೂಗು ಕೇಳಿ ಬರುತ್ತಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟರ್ ಸಚಿನ್ ಹೇಳಿಕೆ ನೀಡಿದ್ದು, ಅದಕ್ಕೆ ಗಂಗೂಲಿ ಪ್ರತಿಕ್ರಿಯೆ ನೀಡಿದ್ದಾರೆ.

ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ಬಗ್ಗೆ ಮಾತನಾಡಿದ್ದ ಸಚಿನ್ ತೆಂಡೂಲ್ಕರ್, ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಭಾರತ ಎರಡು ಅಂಕ ಬಿಟ್ಟುಕೊಡುವುದನ್ನು ನಾನು ವಿರೋಧಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು. ಇದೀಗ ಪ್ರತಿಕ್ರಿಯೆ ನೀಡಿರುವ ಗಂಗೂಲಿ ಅವರಿಗೆ ಎರಡು ಅಂಕ ಬೇಕು. ಆದರೆ ನನಗೆ ವಿಶ್ವಕಪ್ ಬೇಕು ಎಂದು ಹೇಳಿದ್ದಾರೆ.

ವಿಶ್ವಕಪ್ 10 ತಂಡಗಳ ನಡುವಿನ ಹೋರಾಟ, ಎಲ್ಲ ತಂಡಗಳೂ ಪ್ರತಿ ತಂಡದೊಂದಿಗೆ ಫೈಟ್ ನಡೆಸುತ್ತದೆ. ಒಂದು ವೇಳೆ ಇಂಡಿಯಾ ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಒಂದು ಪಂದ್ಯ ಆಡಿಲ್ಲವೆಂದರೆ ಯಾವುದೇ ನಷ್ಟವಾಗುವುದಿಲ್ಲ ಎಂದಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions